ಭಾರತ್ ಜೋಡೋ ಯಾತ್ರೆಯಲ್ಲಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಸೋನಿಯಾ ಗಾಂಧಿ

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಸ್ವಲ್ಪ ದೂರ ನಡೆದರು.
ಕರ್ನಾಟಕದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಸೋನಿಯಾ ಗಾಂಧಿ
ಕರ್ನಾಟಕದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಸೋನಿಯಾ ಗಾಂಧಿ

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಸ್ವಲ್ಪ ದೂರ ನಡೆದರು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆಯಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷರು ಎರಡನೇ ಬಾರಿಗೆ ಹೆಜ್ಜೆ ಹಾಕಿದ್ದಾರೆ.

ಈ ಹಿಂದೆ ಅಕ್ಟೋಬರ್‌ನಲ್ಲಿ ಭಾರತ್ ಜೋಡೋ ಯಾತ್ರೆಯು ಕರ್ನಾಟಕದಲ್ಲಿದ್ದಾಗ ಅವರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ಸೋನಿಯಾ ಗಾಂಧಿ ಅವರು ಮಾಸ್ಕ್ ಧರಿಸಿ, ತಮ್ಮ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಕೆಲವು ನಿಮಿಷಗಳ ಕಾಲ ನಡೆದರು. ಯಾತ್ರೆಯು ಇಲ್ಲಿನ ಆಶ್ರಮ ಚೌಕ್‌ಗೆ ತಲುಪಿ ಬೆಳಗಿನ ವಿರಾಮವನ್ನು ಪಡೆಯಿತು.

ಶನಿವಾರ ಬೆಳಗ್ಗೆ ಹರಿಯಾಣದಿಂದ ದೆಹಲಿ ಪ್ರವೇಶಿಸಿದ ಯಾತ್ರೆಗೆ ಬಾದರ್‌ಪುರ ಗಡಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಆತ್ಮೀಯ ಸ್ವಾಗತ ಕೋರಿದರು.

ಮೆರವಣಿಗೆಯು ರಾಷ್ಟ್ರ ರಾಜಧಾನಿಯ ಮೂಲಕ ಸಾಗುತ್ತಿದ್ದಂತೆ ದೆಹಲಿಯ ಕೆಲವು ಭಾಗಗಳಿಂದ ಸಂಚಾರ ದಟ್ಟಣೆ ವರದಿಯಾಗಿದೆ. ಸಂಜೆ ಕೆಂಪುಕೋಟೆ ಬಳಿ ಯಾತ್ರೆ ನಿಲ್ಲಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com