ಉತ್ತರಾಖಂಡ್: ವಿದ್ಯಾರ್ಥಿ ಸಂಘದ ಚುನಾವಣೆ, ಎಬಿವಿಪಿ, ಸ್ವತಂತ್ರ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು

ಉತ್ತರಾಖಂಡ್ ನ ವಿದ್ಯಾರ್ಥಿ ಸಂಘಕ್ಕೆ 123 ಕಾಲೇಜುಗಳಲ್ಲಿ ನಡೆದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಸ್ವತಂತ್ರರು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ  ಪ್ರಾಬಲ್ಯ ಮೆರೆದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಡೆಹ್ರಾಡೂನ್: ಉತ್ತರಾಖಂಡ್ ನ ವಿದ್ಯಾರ್ಥಿ ಸಂಘಕ್ಕೆ 123 ಕಾಲೇಜುಗಳಲ್ಲಿ ನಡೆದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಸ್ವತಂತ್ರರು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ  ಪ್ರಾಬಲ್ಯ ಮೆರೆದಿದ್ದಾರೆ.

ಎಬಿವಿಪಿ 40 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಸ್ವತಂತ್ರರು 33 ಸ್ಥಾನಗಳಲ್ಲಿ ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಕೇವಲ 18 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮೂರನೇ ಸ್ಥಾನಕ್ಕೆ ತೃಪ್ತಿ ಪಡುವಂತಾಯಿತು. ಉಳಿದ ಫಲಿತಾಂಶಗಳಿಗಾಗಿ ಕಾಯಲಾಗುತ್ತಿದೆ

ಎರಡು ವರ್ಷಗಳ ನಂತರ ನಡೆದ ಈ ಚುನಾವಣೆಯಲ್ಲಿ ಪ್ರಮುಖ ಕಾಲೇಜುಗಳಲ್ಲಿ ಮಹಿಳಾ ಅಭ್ಯರ್ಥಿಗಳು ಐತಿಹಾಸಿಕ ಜಯ ದಾಖಲಿಸಿದ್ದಾರೆ. ರಾಜ್ಯದ 123 ಕಾಲೇಜುಗಳಲ್ಲಿ ಏಕಕಾಲಕ್ಕೆ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಕೆಲವೊಂದು ಸಣ್ಣಪುಟ್ಟ ಅಹಿತಕರ ಘಟನೆ ಹೊರತುಪಡಿಸಿದರೆ ಉಳಿದ ಎಲ್ಲಾ ಕಡೆಗಳಲ್ಲಿ ಪರಿಸ್ಥಿತಿ ಸರ್ವೆ ಸಾಮಾನ್ಯವಾಗಿತ್ತು.

ಉತ್ತರಾಖಂಡ್ ನ ಅತಿದೊಡ್ಡ ವಿದ್ಯಾರ್ಥಿ ಒಕ್ಕೂಟವಾದ ಡೆಹ್ರಾಡೂನ್‌ನ ಡಿಎವಿ ಪಿಜಿ ಕಾಲೇಜಿನಲ್ಲಿ ಎನ್‌ಎಸ್‌ಯುಐ ಸತತ 14 ನೇ ಬಾರಿಗೆ ಸೋಲನ್ನು ಅನುಭವಿಸಿತು. ಎಬಿವಿಪಿಯ ದಯಾಳ್ ಬಿಷ್ತ್ ಇಲ್ಲಿ ಗೆದ್ದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com