ವಿಶ್ವದಾದ್ಯಂತ ಸಂಭ್ರಮದ ಕ್ರಿಸ್'ಮಸ್ ಆಚರಣೆ: ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ
ವಿಶ್ವದಾದ್ಯಂತ ಸಂಭ್ರಮದ ಕ್ರಿಸ್'ಮಸ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
Published: 25th December 2022 08:44 AM | Last Updated: 25th December 2022 01:37 PM | A+A A-

ಪ್ರಧಾನಿ ಮೋದಿ
ನವದೆಹಲಿ: ವಿಶ್ವದಾದ್ಯಂತ ಸಂಭ್ರಮದ ಕ್ರಿಸ್'ಮಸ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿರುವ ಅವರು, ಮೇರಿ ಕ್ರಿಸ್ ಮಸ್! ಈ ವಿಶೇಷ ದಿನವು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಸಂತೋಷದ ಮನೋಭಾವವನ್ನು ಇನ್ನಷ್ಟು ಹೆಚ್ಚಿಸಲಿ. ನಾವು ಯೇಸು ಕ್ರಿಸ್ತನ ಉದಾತ್ತ ಚಿಂತನೆಗಳನ್ನು ಹಾಗೂ ಅವರು ಸಮಾಜಕ್ಕೆ ಸೇವೆ ಸಲ್ಲಿಸಲು ಒತ್ತು ನೀಡಿದ್ದನ್ನು ಸ್ಮರಿಸುತ್ತೇವೆಂದು ಹೇಳಿದ್ದಾರೆ.
ಇದನ್ನೂ ಓದಿ: ಸಾಂತಾಕ್ಲಾಸ್ ವೇಷ ಧರಿಸುವಂತೆ ಹಿಂದೂ ಮಕ್ಕಳನ್ನು ಕೇಳಬೇಡಿ: ವಿಎಚ್‌ಪಿ
ವಿಶ್ವದಾದ್ಯಂತ ಕ್ರಿಸ್'ಮಸ್ ಹಬ್ಬುನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾತ್ರಿಯಿಂದಲೇ ಚರ್ಚ್'ಗಳಿಗೆ ತೆರಳಿ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತಿದೆ. ಕ್ರಿಸ್'ಮಸ್ ಅಂಗವಾಗಿ ಚರ್ಚ್'ಗಳಿಗೆ ದೀಪಾಲಂಕಾರಗಳನ್ನು ಮಾಡಲಾಗಿತ್ತು. ರಾತ್ರಿಯಿಂದಲೇ ಚರ್ಚ್'ಗಳಲ್ಲಿ ವಿಶೇಷ ಪ್ರವಚನ ನಡೆಸಲಾಗುತ್ತಿದೆ. ಯೇಸು ಪ್ರಭುವಿಗೆ ನಮನಗಳನ್ನು ಸಲ್ಲಿಸಲಾಗುತ್ತಿದೆ.