ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರಿಂದ ಗುಂಡಿನ ದಾಳಿ, ಪ್ರಾಣಾಪಾಯದಿಂದ ನಾಗರೀಕರು ಪಾರು

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮಾರುಕಟ್ಟೆಯೊಂದರಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲಿದ್ದ ನಾಗರೀಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶೋಪಿಯಾನ್ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮಾರುಕಟ್ಟೆಯೊಂದರಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲಿದ್ದ ನಾಗರೀಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶೋಪಿಯಾನ್ ಜಿಲ್ಲೆಯ ಹೀರ್‌ಪೋರಾ ಪ್ರದೇಶದಲ್ಲಿರುವ ಮಾರುಕಟ್ಟೆಯಲ್ಲಿ ಉಗ್ರರು ದಾಳಿ ನಡೆಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುರಿಹಾಳನ್ ಹೀರ್‌ಪೋರಾ ನಿವಾಸಿ ವಸೀಮ್ ಅಹ್ಮದ್ ವಾನಿ ಎಂಬುವವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರ ಈ ದಾಳಿ ಪ್ರಯತ್ನ ವಿಫಲವಾಗಿದೆ. ಉಗ್ರರು ನಡೆಸಿದ ದಾಳಿಯಲ್ಲಿ ಅಹ್ಮದ್ ವಾನಿ ಗಾಯ ಹಾಗೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಗ್ರರು ಹಾರಿಸಿದ ಗುಂಡುಗಳು ಜಮ್ಮು-ಕಾಶ್ಮೀರ 22ಎ-4422 ನೋಂದಣಿ ಸಂಖ್ಯೆ ಹೊಂದಿರುವ ಹತ್ತಿರದಲ್ಲಿ ನಿಂತಿದ್ದ ವಾಹನಕ್ಕೆ ಬಿದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com