ದೇಶದಲ್ಲಿ ಹೊಸ ಪ್ರಕರಣ ಸಂಖ್ಯೆಯಲ್ಲಿ ಇಂದೂ ಇಳಿಕೆ; ಏರಿಕೆಯಾಗುತ್ತಲೇ ಇರುವ ಕೋವಿಡ್ ರೂಪಾಂತರದ ಭೀತಿ
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 157 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,421ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
Published: 27th December 2022 10:27 AM | Last Updated: 27th December 2022 10:28 AM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 157 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,421ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
ಒಟ್ಟು ಸೋಂಕಿತರ ಸಂಖ್ಯೆ 4,46,77,459 ಕ್ಕೆ ಏರಿಕೆಯಾಗಿದ್ದು, ಇಂದು ಕೇರಳದಲ್ಲಿ ಒಂದು ಸಾವು ಸೇರಿದಂತೆ ಈವರೆಗೆ 5,30,696 ಜನರು ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೈನಂದಿನ ಪಾಸಿಟಿವಿಟಿ ದರ ಶೇ 0.32ರಷ್ಟಿದ್ದು, ಮರಣ ಪ್ರಮಾಣ 1.19 ರಷ್ಟಿದೆ. ಇದರೊಂದಿಗೆ ವಾರದ ಪಾಸಿಟಿವಿಟಿ ದರ ಶೇ 0.18ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ಮತ್ತೆ ಕೋವಿಡ್ ಭೀತಿ: ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಗಳಿಗೆ ಬೇಡಿಕೆ ಹೆಚ್ಚಳ
ಸದ್ಯ ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 49,464 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರೀಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.08ರಷ್ಟಿದೆ.
ಈವರೆಗೆ ಕೋವಿಡ್‌ನಿಂದ 4,41,43,342 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.06 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ.