ಮಾಸ್ಕ್ ಕಡ್ಡಾಯ ನೀತಿ ತರುವ ಕುರಿತು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ: ಕೇಂದ್ರ ಸರ್ಕಾರ
ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಉಲ್ಬಣಿಸಿರುವ ಕೊರೊನಾ ಸೋಂಕು ಇದೀಗ ಭಾರತದಲ್ಲೂ ಹೊಸ ಆಲೆಯ ಭೀತಿ ಸೃಷ್ಟಿ ಮಾಡಿದ್ದು, ಇದರ ನಡುವೆಯೇ ದೇಶದಲ್ಲಿ ಮಾಸ್ಕ್ ಕಡ್ಡಾಯ ನೀತಿ ತರುವ ಕುರಿತು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
Published: 28th December 2022 09:22 PM | Last Updated: 28th December 2022 09:22 PM | A+A A-

ಸಂಗ್ರಹ ಚಿತ್ರ
ನವದೆಹಲಿ: ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಉಲ್ಬಣಿಸಿರುವ ಕೊರೊನಾ ಸೋಂಕು ಇದೀಗ ಭಾರತದಲ್ಲೂ ಹೊಸ ಆಲೆಯ ಭೀತಿ ಸೃಷ್ಟಿ ಮಾಡಿದ್ದು, ಇದರ ನಡುವೆಯೇ ದೇಶದಲ್ಲಿ ಮಾಸ್ಕ್ ಕಡ್ಡಾಯ ನೀತಿ ತರುವ ಕುರಿತು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ನೆರೆಯ ಚೀನಾ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣವಾಗಿದ್ದರೂ, ಮಾಸ್ಕ್ ಆದೇಶವನ್ನು ಮರಳಿ ತರಲು ಕೇಂದ್ರ ಸರ್ಕಾರವು ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಹೇಳಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮೂಲಗಳು ಮಾಹಿತಿ ನೀಡಿದ್ದು, ಸದ್ಯದ ಪರಿಸ್ಥಿತಿಗೆ ಅನುಗುಣವಾಗಿ ಹೇಳುವುದಾದರೆ ಮಾಸ್ಕ್ ಕಡ್ಡಾಯ ನೀತಿ ತರುವ ಕುರಿತು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ ಎಂದು ಹೇಳಿದೆ.
ಅದಾಗ್ಯೂ ಕೇಂದ್ರ ಸರ್ಕಾರವು ಈಗ ಕೋವಿಡ್ ಕುರಿತಂತೆ ಜನರಲ್ಲಿ ಜಾಗೃತಿಗೆ ಹೆಚ್ಚಿನ ಗಮನ ಹರಿಸಲಿದೆ ಎಂದು ಹೇಳಿಕೊಂಡಿದೆ. ಇನ್ನು ಕೋವಿಡ್ ನಾಲ್ಕನೇ ಅಲೆ ಕುರಿತಂತೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದ್ದು, ಮುಂದಿನ 40 ದಿನಗಳು ದೇಶಕ್ಕೆ ಅತ್ಯಂತ ನಿರ್ಣಾಯಕವಾಗಿರಲಿದೆ ಎಂದು ಹೇಳಿದೆ.
ಕೋವಿಡ್ ತಜ್ಞರ ಸಲಹಾ ಸಮಿತಿಯಲ್ಲಿ ನಡೆದ ಸಭೆಯ ಬಳಿಕ ಈ ಮಾಹಿತಿ ಹೊರಬಿದ್ದಿದ್ದು, ಮುಂದಿನ ತಿಂಗಳು ದೇಶದಲ್ಲಿ ಸೋಂಕು ಉತ್ತುಂಗಕ್ಕೇರಲಿದ್ದು ಎಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರ ಮುನ್ನೆಚ್ವರಿಕೆ ನೀಡಿದೆ.
‘ಜನವರಿಯಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣ ಹೆಚ್ಚಾಗಲಿದ್ದು ಮುಂದಿನ 40 ದಿನಗಳು ನಿರ್ಣಾಯಕ. ದೇಶದಲ್ಲಿ ಸೋಂಕು ಉತ್ತುಂಗಕ್ಕೇರಿದರೂ ಜೊತೆಗೆ ಅಲೆ ಎದ್ದರೂ ಸಾವು ಮತ್ತು ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ತೀರಾ ಕಡಿಮೆ ಇರುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಇದನ್ನೂ ಓದಿ: ಕೋವಿಡ್-19: ಮುಂದಿನ 40 ದಿನ ನಿರ್ಣಾಯಕ, ಜನವರಿಯಲ್ಲಿ ದೇಶದಲ್ಲಿ ಕೊರೊನಾ ಹೆಚ್ಚಳ ಸಾಧ್ಯತೆ: ಕೇಂದ್ರ ಸರ್ಕಾರ
ಈ “ಹಿಂದೆ, ಕೋವಿಡ್ -19 ರ ಹೊಸ ಅಲೆಯು ಪೂರ್ವ ಏಷ್ಯಾಕ್ಕೆ ಅಪ್ಪಳಿಸಿದ 30-35 ದಿನಗಳ ನಂತರ ಭಾರತ ಪ್ರವೇಶಿಸಿದ ಉದಾಹರಣ ಇದೆ. ಅದನ್ನು ಆದರಿಸಿ ತಜ್ಞರು ಈ ಎಚ್ಚರಿಕೆ ನೀಡಿದ್ದಾರೆ. ನಿರ್ಲಕ್ಷ್ಯ ವಹಿಸದೆ ಕೋವಿಡ್ ಮುನ್ನೆಚ್ಚರಿಕೆ ನಿರ್ವಹಿಸಿದರೆ ಪರಿಣಾಮಕಾರಿಯಾಗಿ ಪರಿಸ್ಥಿತಿ ಎದುರಿಸಬಹುದು. ಕೋವಿಡ್ ಉಪ ತಳಿ ಹೆಚ್ಚಳದಿಂದ ಸೋಂಕು ಹೆಚ್ಚಳ ನಿರೀಕ್ಷೆ ಇದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಕಳೆದ 24 ಗಂಟೆಗಳಲ್ಲಿ ಬುಧವಾರ ಒಟ್ಟು 188 ಹೊಸ ಕೋವಿಡ್ ಪ್ರಕರಣಗಳು, ಹಿಂದಿನ ದಿನ 157 ಪ್ರಕರಣಗಳು ವರದಿಯಾಗಿವೆ.