ವಿಡಿಯೋಕಾನ್ ಪ್ರಕರಣ: ಚಂದಾ, ದೀಪಕ್ ಕೊಚ್ಚಾರ್, ಧೂತ್ ಸಿಬಿಐ ಕಸ್ಟಡಿ ಡಿ.29ರವರೆಗೆ ವಿಸ್ತರಣೆ

ವಿಡಿಯೋಕಾನ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಸಿಐಸಿಐ ಬ್ಯಾಂಕ್‌ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಮತ್ತು ವಿಡಿಯೋಕಾನ್ ಗ್ರೂಪ್ ಸಂಸ್ಥಾಪಕ...
ಆರೋಪಿಗಳು
ಆರೋಪಿಗಳು

ಮುಂಬೈ: ವಿಡಿಯೋಕಾನ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಸಿಐಸಿಐ ಬ್ಯಾಂಕ್‌ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಮತ್ತು ವಿಡಿಯೋಕಾನ್ ಗ್ರೂಪ್ ಸಂಸ್ಥಾಪಕ ವೇಣುಗೋಪಾಲ್ ಧೂತ್ ಅವರ ಸಿಬಿಐ ಕಸ್ಟಡಿ ಅವಧಿಯನ್ನು ಬುಧವಾರ ಸಿಬಿಐ ವಿಶೇಷ ಕೋರ್ಟ್ ಡಿಸೆಂಬರ್ 29 ರವರೆಗೆ ವಿಸ್ತರಿಸಿದೆ.

ಸಂಕ್ಷಿಪ್ತ ವಿಚಾರಣೆ ನಂತರ ಸಿಬಿಐ ಚಂದಾ ಕೊಚ್ಚಾರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಕಳೆದ ಶುಕ್ರವಾರ ಬಂಧಿಸಿದೆ. ಧೂತ್ ಅವರನ್ನು ಸೋಮವಾರ ಬಂಧಿಸಲಾಗಿತ್ತು.

ಮೂವರು ಆರೋಪಿಗಳನ್ನು ಇಂದು ವಿಶೇಷ ನ್ಯಾಯಾಧೀಶ ಎಸ್ ಎಂ ಮೆಂಜೊಗೆ ಅವರ ಮುಂದೆ ಹಾಜರುಪಡಿಸಲಾಯಿತು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎ ಲಿಮೋಸಿನ್ ಅವರು, ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಇನ್ನೆರಡು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿದರು.

ಎರಡೂ ಕಡೆಯ ವಾದವನ್ನು ಆಲಿಸಿದ ನಂತರ ನ್ಯಾಯಾಲಯ, ಕೊಚ್ಚಾರ್ ದಂಪತಿಯನ್ನು ಮತ್ತು ಧೂತ್ ಅವರನ್ನು ಮತ್ತೆ ಒಂದು ದಿನ ಸಿಬಿಐ ವಶಕ್ಕೆ ನೀಡಿ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com