ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆ: ಭಾರತ ಜೋಡೋ ಯಾತ್ರೆಯಲ್ಲಿ ಕೆಸಿ ವೇಣುಗೋಪಾಲ್

ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು "ರಾಷ್ಟ್ರೀಯ ಪಾದಯಾತ್ರೆ" ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಅವರು ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆಂದು ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು "ರಾಷ್ಟ್ರೀಯ ಪಾದಯಾತ್ರೆ" ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಅವರು ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆಂದು ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಕೆಸಿ ವೇಣುಗೋಪಾಲ್ ಮತ್ತು ಎಐಸಿಸಿ ಜಮ್ಮು ಮತ್ತು ಕಾಶ್ಮೀರ ಉಸ್ತುವಾರಿ ರಜನಿ ಪಾಟೀಲ್ ಅವರು ಸೋಮವಾರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಭೇಟಿ ಮಾಡಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಕುರಿತು ಚರ್ಚಿಸಿದರು.

ಯಾತ್ರೆಯ ಭವಿಷ್ಯದ ಮಾರ್ಗಗಳ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾವು ಕಾಶ್ಮೀರದಲ್ಲಿ ರಾಷ್ಟ್ರಧ್ವಜವನ್ನು ಹಾರಿಸುತ್ತೇವೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಸಭೆ ನಡೆಸಿದ್ದೇವೆ. ಅವರು ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತೇನೆಂದು ತಿಳಿಸಿದ್ದಾರೆ. ಎನ್‌ಸಿ ನಾಯಕರಾದ ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥ ಮೆಹಬೂಬಾ ಮುಫ್ತಿ ಮತ್ತು ಸಿಪಿಎಂ ನಾಯಕ ಎಂವೈ ತರಿಗಾಮಿ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಿದರು.

ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯನ್ನು ಶ್ಲಾಘಿಸಿದ್ದಾರೆ.

ಅವರ ಅದಮ್ಯ ಧೈರ್ಯಕ್ಕೆ ವಂದನೆಗಳು ಮತ್ತು ಫ್ಯಾಸಿಸ್ಟ್ ಶಕ್ತಿಗಳಿಗೆ ಸವಾಲು ಹಾಕುವ ಧೈರ್ಯವಿರುವ ವ್ಯಕ್ತಿಗಳೊಂದಿಗೆ ನಿಲ್ಲುವುದು ನನ್ನ ಕರ್ತವ್ಯ ಎಂದು ನಾನು ಭಾವಿಸುತ್ತೇನೆ. ಅವರೊಂದಿಗೆ ಯಾತ್ರೆಯಲ್ಲಿ ಭಾಗಿಯಾಗುತ್ತೇನೆ. ಉತ್ತಮ ಭಾರತದತ್ತ ತಮ್ಮ ನಡಿಗೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com