ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ವೈಫಲ್ಯ; ರಾಹುಲ್‌ ಗಾಂಧಿಗೆ ಭದ್ರತೆ ನೀಡುವಂತೆ ಅಮಿತ್ ಶಾಗೆ ಕಾಂಗ್ರೆಸ್ ಪತ್ರ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ವೈಫಲ್ಯವಾಗಿದ್ದು, ಕೂಡಲೇ ಅವರಿಗೆ ಸೂಕ್ತ ಭದ್ರತೆ ನೀಡುವಂತೆ ಕಾಂಗ್ರೆಸ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರವೊಂದನ್ನು ಬರೆದಿದೆ.
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ವೈಫಲ್ಯವಾಗಿದ್ದು, ಕೂಡಲೇ ಅವರಿಗೆ ಸೂಕ್ತ ಭದ್ರತೆ ನೀಡುವಂತೆ ಕಾಂಗ್ರೆಸ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರವೊಂದನ್ನು ಬರೆದಿದೆ.

ರಾಹುಲ್‌ ಗಾಂಧಿ ಹಮ್ಮಿಕೊಂಡಿರುವ ಭಾರತ್‌ ಜೋಡೋ ಯಾತ್ರೆಯಲ್ಲಿ ಹಲವು ಬಾರಿ ಭದ್ರತಾ ಲೋಪ ಸಂಭವಿಸಿದೆ. ರಾಹುಲ್‌ಗೆ ನೀಡಿರುವ ಝಡ್‌ಪ್ಲಸ್‌ ಭದ್ರತೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ದೆಹಲಿ ಪೊಲೀಸರು ವಿಫಲವಾಗಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಪತ್ರ ಬರೆದಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ‘ಭಾರತ್‌ ಜೋಡೋ ಯಾತ್ರೆಯು ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆ ಹರಡುವ ಪಾದಯಾತ್ರೆಯಾಗಿದ್ದು, ಸರ್ಕಾರವು ಇದರಲ್ಲಿ ದ್ವೇಷ ರಾಜಕಾರಣ ಮಾಡಬಾರದು. ಸೂಕ್ಷ್ಮ ಪ್ರದೇಶಗಳಾದ ಪಂಜಾಬ್‌ ಮತ್ತು ಹರ್ಯಾಣ ರಾಜ್ಯಗಳಲ್ಲಿ ಯಾತ್ರೆ ಹಾಗೂ ರಾಹುಲ್‌ ಗಾಂಧಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು’ ಎಂದು ಕೋರಿದ್ದಾರೆ.

ಭಾರತ್ ಜೋಡೋ ಯಾತ್ರೆಯ ಭದ್ರತೆಯನ್ನು ಅನೇಕ ಸಂದರ್ಭಗಳಲ್ಲಿ ರಾಜಿ ಮಾಡಿಕೊಳ್ಳಲಾಯಿತು ಮತ್ತು ಹೆಚ್ಚುತ್ತಿರುವ ಜನಸಂದಣಿಯನ್ನು ನಿಯಂತ್ರಿಸುವಲ್ಲಿ ಮತ್ತು ರಾಹುಲ್ ಗಾಂಧಿಯ ಸುತ್ತ ಪರಿಧಿಯನ್ನು ನಿರ್ವಹಿಸುವಲ್ಲಿ ದೆಹಲಿ ಪೊಲೀಸರು ಸಂಪೂರ್ಣವಾಗಿ ವಿಫಲರಾಗಿದ್ದಾರೆ, ಅವರಿಗೆ Z + ಭದ್ರತೆಯನ್ನು ನಿಯೋಜಿಸಲಾಗಿದೆಯಾದರೂ ಅದರ ಸರಿಯಾದ ನಿರ್ವಹಣೆಯಾಗುತ್ತಿಲ್ಲ ಎಂದು ಹೇಳಿದ್ದಾರೆ.

ಅಂತೆಯೇ ಕಾಂಗ್ರೆಸ್ ಪಕ್ಷವು 1.09 ನಿಮಿಷಗಳ ವೀಡಿಯೊವನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಪರಿಸ್ಥಿತಿ "ತೀರಾ ತೀವ್ರವಾಗಿದೆ" ಎಂದು ವೇಣುಗೋಪಾಲ್ ಹೇಳಿದ್ದಾರೆ. 

ಭಾರತ್‌ ಜೋಡೋ ಯಾತ್ರೆಗೆ ಹಲವರಿಗೆ ಆಹ್ವಾನ
ಉತ್ತರಪ್ರದೇಶದಲ್ಲಿ ನಡೆಯುವ ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗಿಯಾಗುವಂತೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌, ಬಿಎಸ್‌ಪಿಯ ಮಾಯಾವತಿ, ಆರ್‌ಎಲ್‌ಡಿಯ ಜಯಂತ್‌ ಸಿಂಗ್‌ಗೆ ರಾಹುಲ್‌ ಗಾಂಧಿ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಆದರೆ ಈ ಆಹ್ವಾನವನ್ನು ಮೂವರು ನಾಯಕರು ಒಪ್ಪಿರುವ ಅಥವಾ ತಿರಸ್ಕರಿಸಿರುವ ಮಾಹಿತಿ ಹೊರಬಿದ್ದಿಲ್ಲ. ಡಿಸೆಂಬರ್‌ 25 ರಿಂದ ಜನವರಿ 2 ರವರೆಗಿನ ವಿರಾಮದ ಬಳಿಕ ಜನವರಿ 3ರಂದು ಉತ್ತರಪ್ರದೇಶದ ಘಾಜಿಯಾಬಾದ್‌ನಿಂದ ಯಾತ್ರೆ ಪುನಾರಂಭಗೊಳ್ಳುತ್ತಿದೆ. ಈ ಆಹ್ವಾನದ ಮೂಲಕ ಸಮಾನಮನಸ್ಕ ಪಕ್ಷಗಳನ್ನು 2024ರ ಲೋಕಸಭಾ ಚುನಾವಣೆ ವೇಳೆಗೆ ಒಂದುಗೂಡಿಸುವ ಉದ್ದೇಶವನ್ನು ರಾಹುಲ್‌ ಗಾಂಧಿ ಹೊಂದಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com