ವಿವಾಹವಾಗಿ 6 ವರ್ಷವಾದ್ರೂ ಮಕ್ಕಳಾಗದ್ದಕ್ಕೆ ಪತ್ನಿಯ ಗುಪ್ತಾಂಗವನ್ನ ರೇಜರ್ ನಿಂದ ಕೊಯ್ದು ಪತಿ ಬಂಧನ!
ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗದ ಹಿನ್ನೆಲೆಯಲ್ಲಿಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ರೇಜರ್ ನಿಂದ ಕೊಯ್ದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
Published: 29th December 2022 01:03 PM | Last Updated: 02nd January 2023 12:10 PM | A+A A-

ಸಾಂದರ್ಭಿಕ ಚಿತ್ರ
ಲಕ್ನೋ: ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗದ ಹಿನ್ನೆಲೆಯಲ್ಲಿಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ರೇಜರ್ ನಿಂದ ಕೊಯ್ದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಪತ್ನಿಯೊಂದಿಗೆ ಅಸಹಜವಾಗಿ ವರ್ತಿಸಿರುವ ಪತಿ ಆಕೆಯ ಗುಪ್ತಾಂಗವನ್ನು ರೇಜರ್ ನಿಂದ ಕೊಯ್ದು ವಿಕೃತಿ ಮೆರೆದಿದ್ದಾನೆ. ಪತ್ನಿ ತೀವ್ರ ಗಾಯಗೊಂಡ ಬಳಿಕ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಆರೋಪಿ ಪತಿಯನ್ನು ಲಕ್ನೋದ ಮೋಹನ್‌ಲಾಲ್‌ಗಂಜ್ ಪೊಲೀಸರು ಬಂಧಿಸಿದ್ದಾರೆ.
ದಂಪತಿಗೆ ಮದುವೆಯಾಗಿ 6 ವರ್ಷಗಳಾದರೂ ಮಕ್ಕಳಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ಪತಿ, ಪತ್ನಿಗೆ ಚಿತ್ರಹಿಂಸೆ ನೀಡಲು ಪ್ರಾರಂಭಿಸಿದ್ದ. ಕಳೆದ ಮೂರು ತಿಂಗಳಿಂದ ಆಕೆ ತನ್ನ ಪೋಷಕರ ಮನೆಯಲ್ಲಿದ್ದಳು, ಇದರ ಮದ್ಯೆ ನಿನ್ನೆ ಆಕೆಯನ್ನು ಮನೆಗೆ ಕರೆತಂದಿದ್ದಾನೆ. ಹೆಂಡತಿಯ ಜೊತೆ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಮುಂದಾಗಿದ್ದಾನೆ.
ಆಕೆ ವಿರೋಧಿಸಲು ಮುಂದಾದಾಗ ಆಕೆಯ ಗುಪ್ತಾಂಗ ರೇಜರ್ ಬ್ಲೇಡ್ ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ. ಈ ವಿಷಯವನ್ನು ಆಕೆ ತನ್ನ ಸಹೋದರನಿಗೆ ತಿಳಿಸಿದ್ದಾರೆ. ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ ಸಂತ್ರಸ್ತ ಮಹಿಳೆ ಸಹೋದರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.