ರಿಷಭ್ ಪಂತ್ ತಾಯಿಯೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಆರೋಗ್ಯ ವಿಚಾರಣೆ

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಟೀಂ ಇಂಡಿಯಾ ಬ್ಯಾಟರ್ ರಿಷಭ್ ಪಂತ್ ಅವರ ತಾಯಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಆರೋಗ್ಯ ಪರಿಸ್ಥಿತಿ ಕುರಿತು ವಿಚಾರಿಸಿದ್ದಾರೆ.
ರಿಷಭ್ ಪಂತ್, ಪ್ರಧಾನಿ ಮೋದಿ
ರಿಷಭ್ ಪಂತ್, ಪ್ರಧಾನಿ ಮೋದಿ

ನವದೆಹಲಿ: ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಟೀಂ ಇಂಡಿಯಾ ಬ್ಯಾಟರ್ ರಿಷಭ್ ಪಂತ್ ಅವರ ತಾಯಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಆರೋಗ್ಯ ಪರಿಸ್ಥಿತಿ ಕುರಿತು ವಿಚಾರಿಸಿದ್ದಾರೆ.

ದೆಹಲಿಯಿಂದ ರೂರ್ಕಿಗೆ ಹಿಂದಿರುಗುತ್ತಿದ್ದಾಗ ಪಂತ್ ಚಲಾಯಿಸುತ್ತಿದ್ದ ಕಾರ್ ಹಮ್ಮದ್ ಪುರ್ ಜಲ್ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದಾರೆ. 

ತಾಯಿ ಕಳೆದುಕೊಂಡ ನೋವಿನಲ್ಲೂ ಪ್ರಧಾನಿ ನರೇಂದ್ರ ಮೋದಿ, ರಿಷಭ್ ಪಂತ್ ಅವರ ತಾಯಿಯೊಂದಿಗೆ ಮಾತನಾಡಿರುವುದಾಗಿ ವರದಿಯಾಗಿದೆ. ಇದಕ್ಕೂ ಮುನ್ನಾ, ರಿಷಭ್ ಪಂತ್ ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಮೋದಿ ಟ್ವೀಟ್ ಮಾಡಿದ್ದರು.

ಖ್ಯಾತ ಕ್ರಿಕೆಟ್ ಆಟಗಾರ ರಿಷಭ್ ಪಂತ್ ಅವರ ಅಪಘಾತದಿಂದ ದುಃಖಿತವಾಗಿದೆ. ನಾನು ಅವರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com