ತಾಯಿ ಹೀರಾಬೆನ್ ನಿಧನ: ನಿಗದಿತ ಕಾರ್ಯಕ್ರಮಗಳಲ್ಲಿ ಬದಲಾವಣೆ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ಮೋದಿ ಭಾಗಿ

ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ತಮ್ಮ ತಾಯಿ ಹೀರಾಬೆನ್‌ ನಿಧನದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.
ಪ್ರಧಾನಿ  ಮೋದಿ
ಪ್ರಧಾನಿ ಮೋದಿ

ನವದೆಹಲಿ: ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ತಮ್ಮ ತಾಯಿ ಹೀರಾಬೆನ್‌ ನಿಧನದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.

ಅಹಮದಾಬಾದ್ ಆಸ್ಪತ್ರೆಗೆ ದಾಖಲಾಗಿದ್ದ ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ನಿಧನದಿಂದ ಕಾರ್ಯಕ್ರಮಗಳ ಬದಲಾವಣೆ ಅಗತ್ಯವಾಗಿದೆ. ಶುಕ್ರವಾರ ಮುಂಜಾನೆ ತಾಯಿಯ ನಿಧನದ ಬಗ್ಗೆ ಪ್ರಧಾನಿ ಮೋದಿಯವರು ದೇಶಕ್ಕೆ ಮಾಹಿತಿ ನೀಡಿದ್ದಾರೆ.

ಈಗಾಗಲೇ ಮೋದಿಯವರು ಅಹ್ಮದಾಬಾದ್'ಗೆ ತಲುಪಿದ್ದು, ತಾಯಿಯ ಅಂತಿಮ ಸಂಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಪಶ್ಚಿಮ ಬಂಗಾಳದ ಹೌರಾದಲ್ಲಿ ವಂದೇ ಭಾರತ್ ರೈಲಿಗೆ ಚಾಲನೆ ಮತ್ತು ರೈಲ್ವೆಯ ಇತರ ಅಭಿವೃದ್ಧಿ ಕಾಮಗಾರಿಗಳು ಹಾಗೂ ನಮಾಮಿ ಗಂಗೆ ಯೋಜನೆ ಅಡಿಯಲ್ಲಿ ರಾಷ್ಟ್ರೀಯ ಗಂಗಾ ಕೌನ್ಸಿಲ್‌ನ ಸಭೆ ನಡೆಯಬೇಕಿತ್ತು. ಇದೀಗ ಈ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ ಪ್ರಧಾನಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.

ಇಂದು ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಹೌರಾ ರೈಲು ನಿಲ್ದಾಣದಲ್ಲಿ ಹೌರಾದಿಂದ ನ್ಯೂ ಜಲ್ಪೈಗುರಿಗೆ ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡುವ ಸಾಧ್ಯತೆಯಿದೆ. ಜೊತೆಗೆ ರಾಜ್ಯದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಸಾಧ್ಯತೆಯಿದೆ. ಇದು ಪಶ್ಚಿಮ ಬಂಗಾಳದ ಮೊದಲ ಮತ್ತು ದೇಶದ ಏಳನೇ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಾಗಿದೆ. ಇದಕ್ಕೂ ಮೊದಲು 6ನೇ ರೈಲು ಡಿಸೆಂಬರ್ 11ರಂದು ಬಿಲಾಸ್ಪುರ್ (ಛತ್ತೀಸ್‌ಗಢ) ನಾಗಪುರ (ಮಹಾರಾಷ್ಟ್ರ) ಮಾರ್ಗದಲ್ಲಿ ಉದ್ಘಾಟನೆಯಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com