ಭಾರತದಲ್ಲಿ ಮೂಲಭೂತ ಹಕ್ಕುಗಳು 'ಐಷಾರಾಮಿ' ಮತ್ತು 'ಅರ್ಹತೆ'ಗಳಾಗಿ ಮಾರ್ಪಟ್ಟಿವೆ: ಸಿಜೆಐಗೆ ಮೆಹಬೂಬಾ ಪತ್ರ

ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳಲ್ಲಿ ಸರ್ಕಾರದ ರೇಖೆಯನ್ನು ಅನುಸರಿಸುವವರಿಗೆ ಮಾತ್ರ ದೇಶದಲ್ಲಿ ಮೂಲಭೂತ ಹಕ್ಕುಗಳು ಈಗ 'ಐಷಾರಾಮಿ' ಮತ್ತು 'ಅರ್ಹತೆಗಳು' ಆಗಿವೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.
ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ

ಶ್ರೀನಗರ: ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳಲ್ಲಿ ಸರ್ಕಾರದ ರೇಖೆಯನ್ನು ಅನುಸರಿಸುವವರಿಗೆ ಮಾತ್ರ ದೇಶದಲ್ಲಿ ಮೂಲಭೂತ ಹಕ್ಕುಗಳು ಈಗ 'ಐಷಾರಾಮಿ' ಮತ್ತು 'ಅರ್ಹತೆಗಳು' ಆಗಿವೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಮೆಹಬೂಬಾ ಮುಫ್ತಿ ಜಮ್ಮು ಮತ್ತು ಕಾಶ್ಮೀರದ ವಿಷಯಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಮುಫ್ತಿ ಅವರು ಬಿಜೆಪಿ ವಿರುದ್ಧವೂ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಯವರು ಸಂವಿಧಾನವನ್ನು ನಾಶ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪತ್ರದಲ್ಲಿ 'ಜಮ್ಮು ಮತ್ತು ಕಾಶ್ಮೀರದ ಜನರ ಮೇಲೆ ನಡೆಸುತ್ತಿರುವ ಕ್ರೌರ್ಯವನ್ನು ನ್ಯಾಯಾಂಗವೇ ಗಮನಿಸುತ್ತಿಲ್ಲ' ಎಂದು ಹೇಳಿದ್ದಾರೆ. ಕೇಂದ್ರಾಡಳಿತ ಪ್ರದೇಶದ ಜನರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಅವರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಆದರೆ ನ್ಯಾಯಾಂಗವು ಅದನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಬರೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮುಫ್ತಿ, 'ಸಾಮಾನ್ಯ ನಾಗರಿಕರು, ಪತ್ರಕರ್ತರು, ಮುಖ್ಯವಾಹಿನಿಯ ರಾಜಕೀಯ ಕಾರ್ಯಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರು ತಮ್ಮ ಮೂಲಭೂತ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಮೊಟಕುಗೊಳಿಸುವ ದಮನಕಾರಿ ಅನಿಯಂತ್ರಿತ ನಿರ್ಧಾರಗಳ ಭಾರವನ್ನು ಹೊತ್ತಿರುವ ಲೆಕ್ಕವಿಲ್ಲದಷ್ಟು ಉದಾಹರಣೆಗಳಿವೆ. ಅಲ್ಲದೆ ತಮ್ಮ, ಮಗಳು ಮತ್ತು ತಾಯಿಯ ಪಾಸ್‌ಪೋರ್ಟ್‌ಗಳನ್ನು ಸರ್ಕಾರ ಕಿತ್ತುಕೊಂಡಿದೆ ಎಂದು ಬರೆದಿದ್ದಾರೆ. 

ಜಮ್ಮು ಮತ್ತು ಕಾಶ್ಮೀರದ 370ನೇ ವಿಧಿಯನ್ನು ತೆಗೆದುಹಾಕಿದ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮೆಹಬೂಬಾ ಮುಫ್ತಿ ಆಗಾಗ್ಗೆ ವಾಗ್ದಾಳಿ ನಡೆಸುತ್ತಿದ್ದಾರೆ. ಇದಲ್ಲದೆ, ಲಡಾಖ್‌ನಲ್ಲಿ ಚೀನಾದೊಂದಿಗೆ ಭಾರತೀಯ ಸೇನೆಯ ಘರ್ಷಣೆಯ ಸುದ್ದಿಯ ಬಗ್ಗೆಯೂ ಅವರು ಹೇಳಿಕೆ ನೀಡಿದ್ದು ಲಡಾಖ್‌ನಲ್ಲಿ ನಮ್ಮ ಭೂಮಿಯನ್ನು ಅತಿಕ್ರಮಿಸಲಾಗಿದೆ. ಆದರೆ ದುರದೃಷ್ಟವಶಾತ್ ಬಿಜೆಪಿ ಅದರ ಬಗ್ಗೆ ಏನನ್ನೂ ಮಾಡುತ್ತಿಲ್ಲ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com