ಉಗ್ರ ಪೀಡಿತ ಕಾಶ್ಮೀರದಲ್ಲಿ ಸಿಆರ್ ಪಿಎಫ್ ಮಹಿಳಾ ಸಿಬ್ಬಂದಿ ಕೈಯಲ್ಲಿ ಶಸ್ತ್ರಾಸ್ತ್ರ: ಯುದ್ಧ ಕಾರ್ಯಾಚರಣೆಯಲ್ಲಿ ಭಾಗಿ
ಉಗ್ರಗಾಮಿ ಪೀಡಿತ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಮೊದಲ ಬಾರಿಗೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಡ್ರೋನ್‌ಗಳ ನಿರ್ವಹಣೆಯಲ್ಲಿ ತರಬೇತಿ ಪಡೆದ ಮಹಿಳಾ ಸಿಬ್ಬಂದಿಯನ್ನು ಕಾರ್ಯಾಚರಣೆಯ ಕರ್ತವ್ಯಕ್ಕೆ ನಿಯೋಜಿಸಲಿದೆ.
Published: 31st December 2022 10:21 AM | Last Updated: 31st December 2022 10:21 AM | A+A A-

ಸಾಂದರ್ಭಿಕ ಚಿತ್ರ
ಶ್ರೀನಗರ: ಉಗ್ರಗಾಮಿ ಪೀಡಿತ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಮೊದಲ ಬಾರಿಗೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಡ್ರೋನ್‌ಗಳ ನಿರ್ವಹಣೆಯಲ್ಲಿ ತರಬೇತಿ ಪಡೆದ ಮಹಿಳಾ ಸಿಬ್ಬಂದಿಯನ್ನು ಕಾರ್ಯಾಚರಣೆಯ ಕರ್ತವ್ಯಕ್ಕೆ ನಿಯೋಜಿಸಲಿದೆ. ನಿಯೋಜನೆಯು 2023ರ ಮಾರ್ಚ್‌ನಲ್ಲಿ ನಡೆಯಲಿದೆ. ಕಣಿವೆಯಲ್ಲಿ ಉಗ್ರಗಾಮಿಗಳೊಂದಿಗೆ ನೇರ ಹೋರಾಟಕ್ಕಾಗಿ ಯಾವುದೇ ಭದ್ರತಾ ಏಜೆನ್ಸಿಗಳ ಮಹಿಳಾ ಪಡೆಯ ಮೊದಲ ಸೇರ್ಪಡೆಯಾಗಿದೆ.
ಪುರುಷ ಪ್ರಾಬಲ್ಯದ ಭದ್ರತಾ ಪಡೆಗಳ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಮಹಿಳೆಯರು ಅನಾನುಕೂಲತೆಯನ್ನು ಅನುಭವಿಸುತ್ತಿರುವುದನ್ನು ಗಮನಿಸಿದ ಸಿಆರ್‌ಪಿಎಫ್ ಸುತ್ತುವರೆದು ಕಾರ್ಯಾಚರಣೆ ನಡೆಸುವ ಮತ್ತು ಶೋಧ ಕಾರ್ಯಾಚರಣೆಯ ಸಮಯದಲ್ಲಿ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲು ಸಿಆರ್‌ಪಿಎಫ್ ಯೋಜಿಸುತ್ತಿದೆ ಎಂದು ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್ ಜನರಲ್ (ಶ್ರೀನಗರ ವಲಯ) ಚಾರು ಸಿನ್ಹಾ ಟಿಎನ್‌ಐಇಗೆ ತಿಳಿಸಿದ್ದಾರೆ. "ಮಹಿಳೆಯರ ಸೌಕರ್ಯಕ್ಕಾಗಿ, ನಾವು ಶೋಧ ಕಾರ್ಯಾಚರಣೆಯ ಸಮಯದಲ್ಲಿ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಿದ್ದೇವೆ. ಎಂದು ಅವರು ಹೇಳಿದರು.
ಪ್ರಸ್ತುತ, ಮಹಿಳಾ ಸಿಆರ್‌ಪಿಎಫ್ ಸಿಬ್ಬಂದಿಯನ್ನು ಶ್ರೀನಗರ ವಿಮಾನ ನಿಲ್ದಾಣ, ಸಿವಿಲ್ ಸೆಕ್ರೆಟರಿಯೇಟ್ ಮತ್ತು ಇತರ ಸರ್ಕಾರಿ ಸ್ಥಾಪನೆಗಳಲ್ಲಿ ಮಹಿಳೆಯರನ್ನು ಪರೀಕ್ಷಿಸಲು ನಿಯೋಜಿಸಲಾಗಿದೆ. ಮುಂದಿನ ಎರಡು ಮೂರು ತಿಂಗಳಲ್ಲಿ ಕಣಿವೆಯಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲು ನಾವು ಉದ್ದೇಶಿಸಿದ್ದೇವೆ ಎಂದು ಸಿನ್ಹಾ ಹೇಳಿದ್ದಾರೆ.
ಮಹಿಳಾ ಸಿಬ್ಬಂದಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಡ್ರೋನ್‌ಗಳ ಬಳಕೆಯಲ್ಲಿ ಕಣಿವೆಯಲ್ಲಿ ಒಂದೂವರೆ ತಿಂಗಳ ತರಬೇತಿ ನೀಡಲಾಗುವುದು. “ಹೆಚ್ಚುವರಿ ತರಬೇತಿ ಪಡೆದ ನಂತರ, ಮಹಿಳಾ ಸಿಆರ್‌ಪಿಎಫ್ ಸಿಬ್ಬಂದಿಯನ್ನು ತಮ್ಮ ಪುರುಷ ಸಿಬ್ಬಂದಿಗೆ ಸಮನಾಗಿ ಉಗ್ರಗಾಮಿಗಳ ವಿರುದ್ಧ ಹೋರಾಡಲು ಪ್ರತಿ-ಉಗ್ರತಾ ಕಾರ್ಯಾಚರಣೆಯಲ್ಲಿ ನಿಯೋಜಿಸಲಾಗುವುದು. ಪುರುಷ ಕಾನ್‌ಸ್ಟೇಬಲ್ ಗಳು ಮಾಡುವ ಎಲ್ಲ ಕೆಲಸವನ್ನೂ ಮಹಿಳಾ ಸಿಬ್ಬಂದಿ ಮಾಡಲಿದ್ದಾರೆ ಎಂದು ಸಿನ್ಹಾ ಹೇಳಿದ್ದಾರೆ.
ಮಹಿಳಾ ಸಿಬ್ಬಂದಿಯ ತರಬೇತಿಯು ಪುರುಷರಂತೆಯೇ ಇರುತ್ತದೆ. ಪುರುಷ ಸಿಬ್ಬಂದಿಯಂತೆ ಅದೇ ಶಸ್ತ್ರಾಸ್ತ್ರಗಳನ್ನು ಹೊಂದಿರುತ್ತಾರೆ ಎಂದು ಅವರು ಹೇಳಿದರು.