ಗುಜರಾತ್: ಅಪ್ರಾಪ್ತೆ ಮೇಲೆ ಪದೇ ಪದೇ ಅತ್ಯಾಚಾರ, ಗರ್ಭಧರಿಸಲು ಕಾರಣವಾದ ವ್ಯಕ್ತಿಯ ಬಂಧನ

ಗುಜರಾತ್‌ನ ಜುನಾಗಢ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿ ಆಕೆಯು ಗರ್ಭಧರಿಸಲು ಕಾರಣವಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜುನಾಗಢ: ಗುಜರಾತ್‌ನ ಜುನಾಗಢ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿ ಆಕೆಯು ಗರ್ಭಧರಿಸಲು ಕಾರಣವಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೇಶೋಡ್ ಪೊಲೀಸ್ ಇನ್ಸ್ ಪೆಕ್ಟರ್ ಡಿ.ಬಿ. ಕೋಲಿ ಮಾತನಾಡಿ, 55 ವರ್ಷದ ಆರೋಪಿ ಕರ್ಸನ್ ಅಲಿಯಾಸ್ ಬಾಬು ಮಾಲ್ಮರ್ ನನ್ನು ಶುಕ್ರವಾರ ಸಂಜೆ ಬಂಧಿಸಲಾಗಿದ್ದು, ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಸುದ್ದಿಸಂಸ್ಥೆ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.

16 ವರ್ಷದ ಸಂತ್ರಸ್ತೆ ಹೊಟ್ಟೆನೋವು ಎಂದ ನಂತರ ಆಸ್ಪತ್ರೆಗೆ ಕರೆದೊಯ್ದಿದ್ದಾಗ ಗುರುವಾರವಷ್ಟೇ ಈ ಘಟನೆ ಬೆಳಕಿಗೆ ಬಂದಿದೆ. ವೈದ್ಯರು ಪರಿಶೀಲಿಸಿದಾಗ ಸಂತ್ರಸ್ತೆ ಗರ್ಭಿಣಿಯಾಗಿದ್ದು, ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಕೋಲಿ ಹೇಳಿದ್ದಾರೆ.

ಆರೋಪಿಯು ಒಂಬತ್ತರಿಂದ 10 ತಿಂಗಳ ಹಿಂದೆ ಮೊದಲ ಬಾರಿಗೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆ ಬಗ್ಗೆ ಯಾರಿಗಾದರೂ ತಿಳಿಸಿದರೆ ಆಕೆಯನ್ನು ಮತ್ತು ಆಕೆಯ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಕೇಶೋಡ್ ಪೊಲೀಸ್ ಠಾಣೆಗೆ ನೀಡಿದ ಕ್ರಿಮಿನಲ್ ದೂರಿನಲ್ಲಿ ಬಾಲಕಿಯ ಪೋಷಕರು ತಿಳಿಸಿದ್ದಾರೆ.

ಇದರ ಲಾಭ ಪಡೆದು ಪದೇ ಪದೇ ಅತ್ಯಾಚಾರ ಎಸಗುತ್ತಿದ್ದ. ಸದ್ಯ ತನಿಖೆ ನಡೆಯುತ್ತಿದೆ ಮತ್ತು ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಕೋಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com