ಆರ್‌ಎಸ್‌ಎಸ್ ಪ್ರಧಾನ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ, ಭದ್ರತೆ ಹೆಚ್ಚಳ
ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಪ್ರಧಾನ ಕಛೇರಿಯನ್ನು ಸ್ಫೋಟಿಸುವುದಾಗಿ ಶನಿವಾರ ಅಪರಿಚಿತ ವ್ಯಕ್ತಿಯೊಬ್ಬರು ಫೋನ್ ಮಾಡಿ ಬೆದರಿಕೆ ಹಾಕಿದ್ದು,...
Published: 31st December 2022 07:14 PM | Last Updated: 31st December 2022 07:14 PM | A+A A-

ಸಾಂದರ್ಭಿಕ ಚಿತ್ರ
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಪ್ರಧಾನ ಕಛೇರಿಯನ್ನು ಸ್ಫೋಟಿಸುವುದಾಗಿ ಶನಿವಾರ ಅಪರಿಚಿತ ವ್ಯಕ್ತಿಯೊಬ್ಬರು ಫೋನ್ ಮಾಡಿ ಬೆದರಿಕೆ ಹಾಕಿದ್ದು, ಕಚೇರಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
"ಇಂದು ಮಧ್ಯಾಹ್ನ 1 ಗಂಟೆಗೆ ಪೊಲೀಸ್ ಕಂಟ್ರೋಲ್ ರೂಮ್‌ಗೆ ಫೋನ್ ಕರೆ ಬಂದಿದೆ. ಮಹಲ್ ಪ್ರದೇಶದಲ್ಲಿನ ಆರ್‌ಎಸ್‌ಎಸ್ ಕೇಂದ್ರ ಕಚೇರಿಯನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ" ಎಂದು ವಲಯ-3 ಡಿಸಿಪಿ ಗೋರಖ್ ಭಮ್ರೆ ಅವರು ಹೇಳಿದ್ದಾರೆ.
ಇದನ್ನು ಓದಿ: ಬಿಜೆಪಿ-ಆರ್ ಎಸ್ಎಸ್ ದ್ವೇಷ ಹರಡುತ್ತದೆ, ಆದರೆ ಭಾರತ ಜನ ಹಾಗಿಲ್ಲ: ದೆಹಲಿಯಲ್ಲಿ ಮಹಾತ್ಮಾ ಗಾಂಧಿ, ಮಾಜಿ ಪ್ರಧಾನಿಗಳ ಸ್ಮಾರಕಕ್ಕೆ ರಾಹುಲ್ ಗಾಂಧಿ ಭೇಟಿ
ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ(ಬಿಡಿಡಿಎಸ್) ಹಾಗೂ ಶ್ವಾನ ದಳವನ್ನು ಕರೆಸಿ ಕಚೇರಿ ಆವರಣವನ್ನು ಕೂಲಂಕಷವಾಗಿ ಪರಿಶೀಲಿಸಿದರೂ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಗಸ್ತು ಹೆಚ್ಚಿಸಲಾಗಿದ್ದು, ಕರೆ ಮಾಡಿದವರನ್ನು ಗುರುತಿಸಲು ಪೊಲೀಸರು ಫೋನ್ ಸಂಖ್ಯೆಯನ್ನು ಟ್ರ್ಯಾಕ್ ಮಾಡುತ್ತಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.