ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್, ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕೊಳವೆ ಬಾವಿಗೆ ಎಸೆದ ಆರೋಪಿಗಳು
ಮೌ ಜಿಲ್ಲೆಯ ಘೋಸಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಮತ್ತು ಕೊಳವೆ ಬಾವಿಗೆ ಎಸೆಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Published: 31st December 2022 12:45 PM | Last Updated: 31st December 2022 12:45 PM | A+A A-

ಪ್ರಾತಿನಿಧಿಕ ಚಿತ್ರ
ಮೌ: ಜಿಲ್ಲೆಯ ಘೋಸಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಮತ್ತು ಕೊಳವೆ ಬಾವಿಗೆ ಎಸೆಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಸಂತ್ರಸ್ತೆಯ ತಂದೆ ನೀಡಿರುವ ದೂರಿನ ಪ್ರಕಾರ, ಶುಕ್ರವಾರ ಬೆಳಗ್ಗೆ ಕಸ ಎಸೆಯಲು ಹೋಗಿದ್ದ ಆಕೆಯನ್ನು ಆರೋಪಿಗಳು ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇದನ್ನು ಕಂಡ ಕಾರ್ಮಿಕರು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅಪ್ರಾಪ್ತೆಯನ್ನು ರಕ್ಷಿಸಲಾಗಿದೆ.
ಸಂತ್ರಸ್ತೆ ತನ್ನ ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ಜಮೀನಿನಲ್ಲಿನ ಕೊಳವೆ ಬಾವಿಯೊಳಗೆ ಕೈ ಮತ್ತು ಕಾಲುಗಳನ್ನು ಕಟ್ಟಿ ಬಾಯಿಯೊಳಗೆ ಬಟ್ಟೆಯನ್ನು ತುರುಕಿರುವ ರೀತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಹೆಚ್ಚುವರಿ ಎಸ್ಪಿ ತ್ರಿಭುವನ್ ನಾಥ್ ತಿಳಿಸಿದ್ದಾರೆ.
ಇದನ್ನೂ ಓದಿ: ಗುಜರಾತ್: ಅಪ್ರಾಪ್ತೆ ಮೇಲೆ ಪದೇ ಪದೇ ಅತ್ಯಾಚಾರ, ಗರ್ಭಧರಿಸಲು ಕಾರಣವಾದ ವ್ಯಕ್ತಿಯ ಬಂಧನ
ಪೊಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.