ಶೋಪಿಯಾನ್: ಹಿಜ್ಬುಲ್ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ!
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಮೃತ ಭಯೋತ್ಪಾದಕನನ್ನು ಉಮರ್ ಇಶ್ಫಾಕ್ ಮಲಿಕ್ ಅಲಿಯಾಸ್ ಮೂಸಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 02nd February 2022 08:55 PM | Last Updated: 02nd February 2022 08:55 PM | A+A A-

ಭಾರತೀಯ ಸೇನೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಮೃತ ಭಯೋತ್ಪಾದಕನನ್ನು ಉಮರ್ ಇಶ್ಫಾಕ್ ಮಲಿಕ್ ಅಲಿಯಾಸ್ ಮೂಸಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶೋಪಿಯಾನ್ನ ನಾಡಿಗಂ ಗ್ರಾಮ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಸೇನೆ ಮತ್ತು ಸಿಆರ್ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ಯೋಧರ ತಂಡ ಸ್ಥಳಕ್ಕಾಗಮಿಸುತ್ತಿದ್ದಂತೆಯೇ ಅಡಗಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದರು. ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಅವನ ದೇಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಶೋಪಿಯಾನ್ನ ಬೊಂಗಮ್ ನಿವಾಸಿ ಮಲಿಕ್ ಅಲಿಯಾಸ್ ಮೂಸಾ ನಿಷೇಧಿತ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ನೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಅವರು ಹೇಳಿದರು.
ಹತ್ಯೆಗೀಡಾದ ಭಯೋತ್ಪಾದಕ 2020ರಿಂದ ಸಕ್ರಿಯವಾಗಿದ್ದು, ಹಲವಾರು ಭಯೋತ್ಪಾದಕ ಘಟನೆಗಳಲ್ಲಿ ಭಾಗಿಯಾಗಿದ್ದಾನೆ ಎಂದು ವಕ್ತಾರರು ತಿಳಿಸಿದ್ದಾರೆ. ಇತ್ತೀಚೆಗೆ ಶೋಪಿಯಾನ್ನ ಅಮಿಶಿಜಿಪೋರಾದಲ್ಲಿ ಎಎಸ್ಐ ಶಬೀರ್ ಅಹ್ಮದ್ ಮೇಲೆ ನಡೆದ ದಾಳಿಯಲ್ಲೂ ಮಲಿಕ್ ಭಾಗಿಯಾಗಿದ್ದಾನೆ ಎಂದು ಅವರು ಹೇಳಿದರು.