ನಿರ್ಮಾಣ ಹಂತದ ಕಟ್ಟಡ ಕುಸಿತ: ಪುಣೆಯಲ್ಲಿ ಐವರು ಸಾವು, ಹಲವರಿಗೆ ಗಾಯ
ಪುಣೆಯ ಯರವಾಡ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಚಾವಣಿ ಕುಸಿದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಹಲವರು ಸಿಲುಕಿರುವ ಶಂಕೆ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Published: 04th February 2022 11:34 AM | Last Updated: 04th February 2022 11:34 AM | A+A A-

ಸಾಂದರ್ಭಿಕ ಚಿತ್ರ
ಪುಣೆ: ಪುಣೆಯ ಯರವಾಡ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಚಾವಣಿ ಕುಸಿದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಹಲವರು ಸಿಲುಕಿರುವ ಶಂಕೆ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಯರವಾಡ ವ್ಯಾಪ್ತಿಯ ಶಾಸ್ತ್ರಿ ನಗರದ ಲೇನ್ ಸಂಖ್ಯೆ 8 ರಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಗುರುವಾರ ರಾತ್ರಿ 11 ಗಂಟೆಗೆ ಈ ಕಟ್ಟಡದ ಚಾವಣಿ ಕುಸಿಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಘಟನೆ ಕುರಿತು ಮಾಹಿತಿ ನೀಡಿರುವ ಯರವಾಡ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶೇಖ್, ‘ಇದುವರೆಗೆ ಆರು ಮಂದಿ ಮೃತಪಟ್ಟಿರುವುದು ತಿಳಿದುಬಂದಿದೆ. ಅವರ ದೇಹಗಳನ್ನು ಸಾಸೂನ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಇದು ನಿರ್ಮಾಣ ಹಂತದಲ್ಲಿರುವ ಕಟ್ಟಡವಾಗಿದ್ದು, ಘಟನೆ ಸಂಭವಿಸಿದಾಗ ಕಾರ್ಮಿಕರು ಚಾವಣಿ ಕೆಲಸದಲ್ಲಿ ತೊಡಗಿದ್ದರು’ ಎಂದು ಹೇಳಿದ್ದಾರೆ. ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.