ಚರಣ್ ಜಿತ್ ಸಿಂಗ್ ಚನ್ನಿ ಪಂಜಾಬಿನ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ: ರಾಹುಲ್ ಗಾಂಧಿ ಘೋಷಣೆ
ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಕಾಂಗ್ರೆಸ್ ಭಾನುವಾರ ಪ್ರಕಟಿಸಿದೆ. ಹಾಲಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರೇ ಮುಂದಿನ ಪಕ್ಷದ ಸಿಎಂ ಅಭ್ಯರ್ಥಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ರಾಹುಲ್ ಗಾಂಧಿ ಘೋಷಿಸಿದ್ದಾರೆ.
Published: 06th February 2022 06:02 PM | Last Updated: 06th February 2022 06:02 PM | A+A A-

ರಾಹುಲ್ ಗಾಂಧಿ, ಚರಣ್ ಜಿತ್ ಸಿಂಗ್ ಚನ್ನಿ ಮತ್ತಿತರರು
ಲೂದಿಯಾನ: ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಕಾಂಗ್ರೆಸ್ ಭಾನುವಾರ ಪ್ರಕಟಿಸಿದೆ. ಹಾಲಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರೇ ಮುಂದಿನ ಪಕ್ಷದ ಸಿಎಂ ಅಭ್ಯರ್ಥಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ರಾಹುಲ್ ಗಾಂಧಿ ಘೋಷಿಸಿದ್ದಾರೆ.
ಲೂದಿಯಾನದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಚರಣ್ ಸಿಂಗ್ ಛನಿ ಮತ್ತು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರಿದ್ದ ವೇದಿಕೆಯಲ್ಲಿ ರಾಹುಲ್ ಗಾಂಧಿ ಈ ಮಹತ್ವದ ಘೋಷಣೆಯನ್ನು ಮಾಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, 40 ವರ್ಷದ ಹಿಂದೆಯೇ ನವಜೋತ್ ಸಿಂಗ್ ಸಿಧು ಅವರನ್ನು ಮೊದಲ ಬಾರಿಗೆ ಭೇಟಿಯಾಗಿದ್ದನ್ನು ವಿವರಿಸಿದರು. 40 ವರ್ಷದ ಹಿಂದೆಯೇ ನವಜೋತ್ ಸಿಂಗ್ ಸಿಧು ಅವರನ್ನು ಭೇಟಿಯಾಗಿದ್ದೆ ಆದರೆ, ನಾನು ಅವರನ್ನು ಭೇಟಿಯಾಗಿರುವುದು ಅವರಿಗೆ ತಿಳಿದಿರಿಲ್ಲ. ಡೂನ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಕ್ರಿಕೆಟ್ ಪಂದ್ಯವೊಂದನ್ನು ಅಡಲು ಸಿಧು ಬಂದಿದ್ದರು ಎಂದು ರಾಹುಲ್ ತಿಳಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಸಿಧು, ರಾಹುಲ್ ಗಾಂಧಿ ಅವರ ನಿರ್ಧಾರವನ್ನು ನಾವೆಲ್ಲ ಒಪ್ಪಿಕೊಳ್ಳುತ್ತೇವೆ. ಒಂದು ವೇಳೆ ನನಗೆ ನಿರ್ಧಾರ ಕೈಗೊಳ್ಳುವ ಅಧಿಕಾರ ಕೊಡದಿದ್ದರೂ ಪಕ್ಷಕ್ಕಾಗಿ ಕೆಲಸ ಮಾಡುತ್ತೇವೆ. ಮಾಫಿಯಾವನ್ನು ಕೊನೆಗೊಳಿಸುತ್ತೇವೆ, ಜನರ ಜೀವನಮಟ್ಟವನ್ನು ಸುಧಾರಿಸುವುದಾಗಿ ಹೇಳಿದರು.