ಪಂಜಾಬ್ ಮುಂದಿನ ಸಿಎಂ ಅಭ್ಯರ್ಥಿ ಘೋಷಿಸಲಿರುವ ಕಾಂಗ್ರೆಸ್, ರಾಹುಲ್ ಗಾಂಧಿಯವರ ನಿರ್ಧಾರಕ್ಕೆ ಬದ್ಧ: ನವಜೋತ್ ಸಿಂಗ್ ಸಿಧು
ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಯ ವಿಚಾರದಲ್ಲಿ ಪ್ರತಿಯೊಬ್ಬರೂ ರಾಹುಲ್ ಗಾಂಧಿಯವರ ತೀರ್ಮಾನವನ್ನು ಬೆಂಬಲಿಸುತ್ತಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
Published: 06th February 2022 09:51 AM | Last Updated: 06th February 2022 10:25 AM | A+A A-

ರಾಹುಲ್ ಗಾಂಧಿ ಜೊತೆ ಪಂಜಾಬ್ ಕಾಂಗ್ರೆಸ್ ನಾಯಕರು
ಚಂಡೀಗಢ: ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಯ ವಿಚಾರದಲ್ಲಿ ಪ್ರತಿಯೊಬ್ಬರೂ ರಾಹುಲ್ ಗಾಂಧಿಯವರ ತೀರ್ಮಾನವನ್ನು ಬೆಂಬಲಿಸುತ್ತಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೆ ವಿಧಾನಸಭೆ ಚುನಾವಣೆಯಲ್ಲಿ ಸಾಧಿಸಿ ತೋರಿಸಲು ಸಾಧ್ಯವಿಲ್ಲ. ನಮ್ಮನ್ನು ಮುನ್ನಡೆಸುವ ರಾಹುಲ್ ಗಾಂಧಿಯವರಿಗೆ ಸ್ವಾಗತ, ಅವರು ಪಂಜಾಬ್ ಗೆ ಸ್ಪಷ್ಟತೆ ಕೊಡಲು ಬರುತ್ತಿದ್ದಾರೆ. ಅವರ ನಿರ್ಧಾರವನ್ನು ನಾವೆಲ್ಲರೂ ಸ್ವಾಗತಿಸುತ್ತೇವೆ ಎಂದು ಸಿಧು ಟ್ವೀಟ್ ಮಾಡಿದ್ದಾರೆ.
ಇನ್ನು ನಿನ್ನೆ ಪ್ರತಿಕ್ರಿಯೆ ನೀಡಿದ್ದ ಸಿಧು, ಪಂಜಾಬ್ ನಲ್ಲಿ ದುರ್ಬಲ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಕಾಂಗ್ರೆಸ್ ನಾಯಕತ್ವ ಘೋಷಣೆ ಮಾಡುವ ಯೋಚನೆಯಲ್ಲಿದೆ ಎನಿಸುತ್ತಿದೆ, ಅವರ ತಾಳಕ್ಕೆ ತಕ್ಕಂತೆ ಕುಣಿಯುವ ಮುಖ್ಯಮಂತ್ರಿ ಅವರಿಗೆ ಬೇಕಾಗಿದೆ ಅನಿಸುತ್ತದೆ ಎಂದು ಹೇಳಿದ್ದರು.
ಇಂದು ಲುಧಿಯಾನದಲ್ಲಿ ವರ್ಚುವಲ್ ರ್ಯಾಲಿಯಲ್ಲಿ ಪಂಜಾಬ್ ನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ರಾಹುಲ್ ಗಾಂಧಿಯವರು ಘೋಷಿಸಲಿದ್ದಾರೆ ಎಂದು ಕಾಂಗ್ರೆಸ್ ಪಂಜಾಬ್ ಮುಖ್ಯಸ್ಥ ಹರೀಶ್ ಚೌಧರಿ ಹೇಳಿದ್ದರು.
ಪಂಜಾಬ್ ವಿಧಾನಸಭೆ ಚುನಾವಣೆ ಫೆಬ್ರವರಿ 20ರಂದು ನಡೆಯಲಿದ್ದು, ಮತ ಎಣಿಕೆ ಮಾರ್ಚ್ 10ರಂದು ನಡೆಯಲಿದೆ.