ಲತಾ ಮಂಗೇಶ್ಕರ್ ನಿಧನ: ಪ್ರಧಾನಿ ಮೋದಿಯವರ ಗೋವಾ ವರ್ಚುವಲ್ ರ್ಯಾಲಿ ರದ್ದು
ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಗೋವಾದಲ್ಲಿ ನಡೆಯಬೇಕಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವರ್ಚುವಲ್ ರ್ಯಾಲಿಯನ್ನು ರದ್ದುಗೊಳಿಸಲಾಗಿದೆ.
Published: 06th February 2022 01:34 PM | Last Updated: 06th February 2022 01:34 PM | A+A A-

ಪ್ರಧಾನಿ ಮೋದಿ
ಸಂಕ್ವೆಲಿಮ್ (ಗೋವಾ): ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಗೋವಾದಲ್ಲಿ ನಡೆಯಬೇಕಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವರ್ಚುವಲ್ ರ್ಯಾಲಿಯನ್ನು ರದ್ದುಗೊಳಿಸಲಾಗಿದೆ.
ಈ ಕುರಿತು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಮಾಹಿತಿ ನೀಡಿದ್ದು, ಲತಾ ಮಂಗೇಶ್ಕರ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಗೋವಾದಲ್ಲಿ ನಡೆಯಬೇಕಿದ ಪ್ರಧಾನಮಂತ್ರಿಗಳ ರ್ಯಾಲಿ ಹಾಗೂ ಇತರೆ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, 2 ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಆಚರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಗೆ ಗೋವಾ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಬೇಕಿತ್ತು. ಇದರ ಜೊತೆಗೆ ನಿತಿನ್ ಗಡ್ಕರಿ ಅವರ ಸಭೆಯನ್ನೂ ರದ್ದುಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಲತಾ ಮಂಗೇಶ್ಕರ್ ನಮ್ಮೆಲ್ಲರ ನಡುವೆ ಅಮರರಾಗಿರುತ್ತಾರೆಂದು ಹೇಳಿದ್ದಾರೆ.
ಗೋವಾದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಗೋವಾದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಭಾಷಣ ಮಾಡಬೇಕಿತ್ತು.