ಪಂಜಾಬ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ರೈತರ ಸಾಲ ಮನ್ನಾ, ಭೂರಹಿತರಿಗೆ ನೆರವು ಭರವಸೆ
ಪಂಜಾಬ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಮಂಗಳವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಐದು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ಎಲ್ಲಾ ರೈತರ ಸಾಲವನ್ನು...
Published: 08th February 2022 06:01 PM | Last Updated: 08th February 2022 06:01 PM | A+A A-

ಸಾಂದರ್ಭಿಕ ಚಿತ್ರ
ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಮಂಗಳವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಐದು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ಎಲ್ಲಾ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಭರವಸೆ ನೀಡಿದೆ.
ಇದಲ್ಲದೆ ಬಿಜೆಪಿ 'ಮೆಹನತ್ ದ ಪಕ್ಕಾ ಮುಲ್' ಭರವಸೆಯನ್ನು ನೀಡಿತು, ಇದರ ಅಡಿಯಲ್ಲಿ ಹಣ್ಣುಗಳು, ತರಕಾರಿಗಳು, ಬೇಳೆಕಾಳುಗಳು ಮತ್ತು ಎಣ್ಣೆಕಾಳುಗಳನ್ನು ಬೆಳೆಯುವ ರೈತರಿಗೆ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ(MSP) ವಿಸ್ತರಣೆ ಮಾಡುವ ಭರವಸೆ ನೀಡಲಾಗಿದೆ.
ಇದನ್ನು ಓದಿ: ಚರಣ್ ಜಿತ್ ಸಿಂಗ್ ಚನ್ನಿ ಪಂಜಾಬಿನ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ: ರಾಹುಲ್ ಗಾಂಧಿ ಘೋಷಣೆ
ಬೆಳೆ ವೈವಿಧ್ಯತೆಯನ್ನು ಉಳಿಸಿಕೊಳ್ಳಲು ಮತ್ತು ಅದನ್ನು ಹೆಚ್ಚು ಲಾಭದಾಯಕವಾಗಿಸಲು ಬಿಜೆಪಿ ಮೈತ್ರಿಯು ಕೃಷಿಗಾಗಿ 5,000 ಕೋಟಿ ರೂಪಾಯಿಗಳ ಪ್ರತ್ಯೇಕ ವಾರ್ಷಿಕ ಬಜೆಟ್ ಮಂಡಿಸುವ ಭರವಸೆ ನೀಡಿದೆ.
ರಾಜ್ಯದಲ್ಲಿ ಒಂದು ಲಕ್ಷ ಎಕರೆ 'ಶಾಮಲತ್ ಭೂಮಿ'ಯನ್ನು ಗ್ರಾಮೀಣ ಭೂರಹಿತ ರೈತರಿಗೆ ಸಾಗುವಳಿ ಮಾಡಲು ಹಂಚಿಕೆ ಮಾಡಲಾಗುವುದು ಎಂದು ಬಿಜೆಪಿ ನೇತೃತ್ವದ ಮೈತ್ರಿಕೂಟ ಭರವಸೆ ನೀಡಿದೆ. ಅಲ್ಲದೆ, ರಾಜ್ಯದ ಪ್ರತಿಯೊಬ್ಬ ಭೂರಹಿತ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ಯೋಜನೆಯಡಿ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದೆ.
ಬಿಜೆಪಿಯ ಅಧಿಕೃತ ಹೇಳಿಕೆಯ ಪ್ರಕಾರ, ಕೇಂದ್ರ ಸಚಿವ ಮತ್ತು ಪಂಜಾಬ್ನ ಬಿಜೆಪಿ ಉಸ್ತುವಾರಿ ಗಜೇಂದ್ರ ಸಿಂಗ್ ಶೇಖಾವತ್, ಶಿರೋಮಣಿ ಅಕಾಲಿದಳ-ಸಂಯುಕ್ತ್ ನಾಯಕ ಸುಖದೇವ್ ಸಿಂಗ್ ದಿಂಡಾ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಭಾಷ್ ಶರ್ಮಾ, ಇದು ಭವಿಷ್ಯದ ಪ್ರಣಾಳಿಕೆಯಾಗಿದೆ. ಪಂಜಾಬ್ನಲ್ಲಿ ಗ್ರಾಮೀಣ ಮತ್ತು ಕೃಷಿ ಆರ್ಥಿಕತೆಯ ಕ್ರಾಂತಿ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.