ನೀತಿ ಸಂಹಿತೆ ಉಲ್ಲಂಘನೆ: ಪ್ರಿಯಾಂಕಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು
ಗೋವಾದಲ್ಲಿ ನಡೆದ ಮನೆ-ಮನೆ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ(ಎಂಸಿಸಿ) ಉಲ್ಲಂಘಿಸಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ಮಂಗಳವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ
Published: 08th February 2022 07:03 PM | Last Updated: 08th February 2022 07:03 PM | A+A A-

ಪ್ರಿಯಾಂಕಾ ಗಾಂಧಿ
ಪಣಜಿ: ಗೋವಾದಲ್ಲಿ ನಡೆದ ಮನೆ-ಮನೆ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ(ಎಂಸಿಸಿ) ಉಲ್ಲಂಘಿಸಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ಮಂಗಳವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ(ಇಸಿ) ದೂರು ಸಲ್ಲಿಸಿದೆ.
ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸಿಗರು ಕೋವಿಡ್ ನಿಬಂಧನೆಗಳನ್ನು ಅನುಸರಿಸಿಲ್ಲ, ಬೆಂಬಲಿಗರು ಮತ್ತು ನಾಯಕರು ಮಾಸ್ಕ್ ಗಳನ್ನು ಧರಿಸಿಲ್ಲ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ ಎಂದು ಟಿಎಂಸಿ ದೂರಿನಲ್ಲಿ ಹೇಳಿದ್ದು, ಇನ್ನು ಮುಂದೆ ಗೋವಾದಲ್ಲಿ ಯಾವುದೇ ಪ್ರಚಾರ ನಡೆಸದಂತೆ ಪ್ರಿಯಾಂಕಾ ಗಾಂಧಿ ಅವರ ಮೇಲೆ ನಿರ್ಬಂಧ ಹೇರಬೇಕು ಎಂದು ಒತ್ತಾಯಿಸಿದೆ.
ಇದನ್ನು ಓದಿ: ಗೋವಾ ಚುನಾವಣೆ: ಕಾಂಗ್ರೆಸ್, ಬಿಜೆಪಿ ನಡುವೆ ಮಾತ್ರ ಪೈಪೋಟಿ- ರಾಹುಲ್ ಗಾಂಧಿ
ಪ್ರಿಯಾಂಕಾ ಗಾಂಧಿ ಅವರು ರಾಜ್ಯಕ್ಕೆ ಒಂದು ದಿನ ಭೇಟಿ ನೀಡಿ, ಹಲವು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದರು. ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ಶೇ. 30 ರಷ್ಟು ಸರ್ಕಾರಿ ಉದ್ಯೋಗಗಳನ್ನು ಮೀಸಲಿಡಲಿದೆ ಮತ್ತು ಗೋವಾದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಗಮನ ವಹಿಸಲಿದೆ. ಟಿಎಂಸಿ ಮತ್ತು ಎಎಪಿಯಂತಹ ಪಕ್ಷಗಳು ಕೇವಲ ಮತಗಳನ್ನು ವಿಭಜಿಸಲು ಇಲ್ಲಿವೆ ಮತ್ತು ಯಾವುದೇ ಸರ್ಕಾರ ರಚಿಸುವ ಅವಕಾಶವಿಲ್ಲ ಎಂದು ಹೇಳಿದರು.
ಗೋವಾದಲ್ಲಿ ಫೆಬ್ರವರಿ 14 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ.