ಛತ್ತೀಸ್ಗಢದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ: ಓರ್ವ ಸಿಆರ್'ಪಿಎಫ್ ಅಧಿಕಾರಿ ಹುತಾತ್ಮ
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್)ಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
Published: 12th February 2022 01:59 PM | Last Updated: 12th February 2022 02:00 PM | A+A A-

ಸಂಗ್ರಹ ಚಿತ್ರ
ರಾಯ್ಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್)ಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಸಿಆರ್ಪಿಎಫ್ನ 168ನೇ ಬೆಟಾಲಿಯನ್ನ ಪಡೆಯು ಭದ್ರತಾ ಕರ್ತವ್ಯದಲ್ಲಿದ್ದಾಗ ಬಸಗುಡ ಪೊಲೀಸ್ ಠಾಣಾ ವ್ಯಾಪ್ತಿಯ ಪುಟ್ಕೆಲ್ ಗ್ರಾಮದ ಬಳಿ ಬೆಳಿಗ್ಗೆ 9:30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಐಜಿ (ಬಸ್ತರ್ ರೇಂಜ್) ಸುಂದರರಾಜ್ ಪಿ ಮಾಹಿತಿ ನೀಡಿದ್ದಾರೆ.
ರಾಯ್ಪುರದಿಂದ ಸುಮಾರು 450 ಕಿಮೀ ದೂರದಲ್ಲಿರುವ ಕಾಡಿನಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆದಿತ್ತು."ಘಟನೆಯಲ್ಲಿ ಸಿಆರ್ಪಿಎಫ್ನ 168 ನೇ ಬೆಟಾಲಿಯನ್ ಪಡೆಗೆ ಸೇರಿದ ಸಹಾಯಕ ಕಮಾಂಡೆಂಟ್ ಶಾಂತಿ ಭೂಷಣ್ ಟಿರ್ಕೆ ಹುತಾತ್ಮರಾಗಿದ್ದು, ಯೋಧ ಅಪ್ಪಾ ರಾವ್ ಅವರಿಗೆ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮತ್ತಷ್ಟು ಭದ್ರತಾ ಪಡೆಗಳು ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಅರಣ್ಯ ಪ್ರದೇಶದಲ್ಲಿದ್ದ ಹುತಾತ್ಮ ಯೋಧನ ಪಾರ್ಥೀವ ಶರೀರವನ್ನು ಸ್ಥಳಾಂತರ ಮಾಡಲಾಗಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.