ಪಂಜಾಬ್ನಲ್ಲಿ ಬಿಜೆಪಿ ನೇತೃತ್ವದ ಮೈತ್ರಿ ಮುಂದಿನ ಸರ್ಕಾರ ರಚಿಸಲಿದೆ: ಪ್ರಧಾನಿ ಮೋದಿ
ಪಂಜಾಬ್ನಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಮುಂದಿನ ಸರ್ಕಾರವನ್ನು ರಚಿಸಲಿದ್ದು, ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದ್ದಾರೆ.
Published: 14th February 2022 06:32 PM | Last Updated: 14th February 2022 06:34 PM | A+A A-

ಪ್ರಧಾನಿ ಮೋದಿ
ಜಲಂಧರ್: ಪಂಜಾಬ್ನಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಮುಂದಿನ ಸರ್ಕಾರವನ್ನು ರಚಿಸಲಿದ್ದು, ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದ್ದಾರೆ.
ಇಂದು ಪಂಜಾಬ್ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ದೇವಿ ತಲಾಬ್ ಮಂದಿರದಲ್ಲಿ ಪೂಜೆ ಸಲ್ಲಿಸಲು ನಾನು ಬಯಸಿದ್ದೆ. ಆದರೆ ಪೊಲೀಸರು ಮತ್ತು ಇಲ್ಲಿನ ಆಡಳಿತ ವ್ಯವಸ್ಥೆ ಅದಕ್ಕೆ ವ್ಯವಸ್ಥೆ ಮಾಡಲಿಲ್ಲ. "ಪಂಜಾಬ್ನಲ್ಲಿ ಎನ್ಡಿಎ ಮೈತ್ರಿಕೂಟ ಸರ್ಕಾರ ರಚಿಸಲಿದೆ. ಪಂಜಾಬ್ನಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದರು.
ಇದನ್ನು ಓದಿ: ಪಂಜಾಬ್ ನಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವುದಿಲ್ಲ: ಮಾಜಿ ಸಿಎಂ ಅಮರಿಂದರ್ ಸಿಂಗ್
ಫೆಬ್ರವರಿ 20ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಇಂದು ತಮ್ಮ ಮೊದಲ ಭೌತಿಕ ರ್ಯಾಲಿಯನ್ನು ಉದ್ದೇಶಿಸಿ ಮೋದಿ ಮಾತನಾಡಿದರು.
ಜನವರಿ 5 ರಂದು, ಫಿರೋಜ್ಪುರದಲ್ಲಿ ಪ್ರತಿಭಟನಾಕಾರರ ದಿಗ್ಬಂಧನದಿಂದಾಗಿ ಅವರ ಬೆಂಗಾವಲು ಮೇಲ್ಸೇತುವೆಯಲ್ಲಿ ಸಿಲುಕಿಕೊಂಡ ನಂತರ ರ್ಯಾಲಿ ಸೇರಿದಂತೆ ಯಾವುದೇ ಕಾರ್ಯಕ್ರಮಕ್ಕೆ ಹಾಜರಾಗದೆ ಪ್ರಧಾನಿ ಪಂಜಾಬ್ನಿಂದ ಹಿಂತಿರುಗಿದ್ದರು.
ಮೋದಿ ಫೆಬ್ರವರಿ 8 ರಂದು ವರ್ಚುವಲ್ ಮೂಲಕ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದರು. ಕಾಂಗ್ರೆಸ್ ನೀತಿಗಳು ಪಂಜಾಬ್ನಲ್ಲಿ ಕೈಗಾರಿಕೆಗಳನ್ನು ನಾಶಮಾಡಿದೆ ಮತ್ತು ಉದ್ಯೋಗದ ಮೇಲೆ ಪರಿಣಾಮ ಬೀರಿದೆ ಎಂದು ವಾಗ್ದಾಳಿ ನಡೆಸಿದ್ದರು.
117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಬಿಜೆಪಿಯು ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಲೋಕ ಕಾಂಗ್ರೆಸ್ ಮತ್ತು ಸುಖದೇವ್ ಸಿಂಗ್ ಧಿಂಡ್ಸಾ ನೇತೃತ್ವದ ಶಿರೋಮಣಿ ಅಕಾಲಿದಳ(ಸಂಯುಕ್ತ) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ.