ಪಂಜಾಬ್ ನಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವುದಿಲ್ಲ: ಮಾಜಿ ಸಿಎಂ ಅಮರಿಂದರ್ ಸಿಂಗ್

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷ ಸ್ಪಷ್ಟ ಬಹುಮತ ಪಡೆಯುವುದಿಲ್ಲ ಎಂದು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಪಂಜಾಬ್ ಲೋಕ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

Published: 14th February 2022 03:20 PM  |   Last Updated: 14th February 2022 04:44 PM   |  A+A-


Amarinder Singh

ಅಮರಿಂದರ್ ಸಿಂಗ್

PTI

ಪಟಿಯಾಲ: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷ ಸ್ಪಷ್ಟ ಬಹುಮತ ಪಡೆಯುವುದಿಲ್ಲ ಎಂದು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಪಂಜಾಬ್ ಲೋಕ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷ ಮತ್ತು ಶಿರೋಮಣಿ ಅಕಾಲಿದಳ-ಸಂಯುಕ್ತ್ ಜೊತೆಗಿನ ತಮ್ಮ ಪಕ್ಷದ ಮೈತ್ರಿಯು ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಮಾಜಿ ಸಿಎಂ ಪ್ರತಿಪಾದಿಸಿದ್ದಾರೆ.

“ನಾನು ನಿವೃತ್ತಿ ಹೊಂದಲು ಸಿದ್ಧನಿಲ್ಲ, ನನ್ನ ಜನರಿಗಾಗಿ ಕೆಲಸ ಮಾಡಲು ಬಯಸುತ್ತೇನೆ. ಇದು ನನ್ನ ಒಂಬತ್ತನೇ ಚುನಾವಣೆ... ನಾನು ಎರಡು ಬಾರಿ ಸಂಸತ್ತಿಗೆ ಮತ್ತು ಆರು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದೇನೆ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.

ಇದನ್ನು ಓದಿ: ಪಂಜಾಬ್: ಅಮರೀಂದರ್ ಸಿಂಗ್ ಸರ್ಕಾರದ ಮೇಲೆ ದೆಹಲಿಯ ಬಿಜೆಪಿ ಸರ್ಕಾರದ ನಿಯಂತ್ರಣವಿತ್ತು: ಪ್ರಿಯಾಂಕಾ ವಾದ್ರಾ

ಪಂಜಾಬ್‌ನಲ್ಲಿ ಚುನಾವಣಾ ಸನ್ನಿವೇಶದಲ್ಲಿ, ಈ ಬಾರಿ ಚತುಷ್ಕೋನ ಅಥವಾ ಐದು ಪಕ್ಷಗಳ ಸ್ಪರ್ಧೆಯಾಗಿದೆ ಮತ್ತು ನಂತರ ಕೆಲವು ಸ್ವತಂತ್ರರು ಕೂಡ ಇದ್ದಾರೆ ಎಂದು ಸಿಂಗ್ ತಿಳಿಸಿದರು.

"ಬಹು-ಪಕ್ಷಗಳ ಸ್ಪರ್ಧೆಯು ಮತದಾರನಿಗೆ ತನಗೆ ಬೇಕಾದುದನ್ನು ನಿರ್ಧರಿಸಲು ಸುಲಭವಾಗುತ್ತದೆ. ಆದರೆ ಪಕ್ಷಗಳ ಕಾರ್ಯಕ್ಷಮತೆಗೆ ಸಂಬಂಧಿಸಿದಂತೆ ಇದು ಅವರಿಗೆ ಕಷ್ಟಕರವಾದ ಹೋರಾಟವಾಗಿದೆ. ಅವರಲ್ಲಿ ಹಲವರಿಗೆ 10, 15 ಸೀಟು ದಾಟುವ ಅವಕಾಶವೇ ಇಲ್ಲ. ಯಾವುದೇ ಪಕ್ಷ ಸ್ಪಷ್ಟ ಬಹುಮತ ಪಡೆಯುದಿಲ್ಲ ಅಂತ ಕಾಣಿಸುತ್ತಿದೆ. ಜನರು ಎಎಪಿ(ಆಮ್ ಆದ್ಮಿ ಪಾರ್ಟಿ) ಬಗ್ಗೆ ಮಾತನಾಡುತ್ತಾರೆ. ಎಎಪಿ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಎಂದು ನಾನು ಭಾವಿಸುತ್ತೇನೆ. ಅದೇ ರೀತಿ ಕಾಂಗ್ರೆಸ್ ಅಧೋಗತಿಗೆ ಹೋಗುತ್ತಿದೆ. ದೇವರ ದಯೆಯಿಂದ ನಾವು ಮೇಲಕ್ಕೆ ಹೋಗುತ್ತಿದ್ದೇವೆ ಎಂದು ಸಿಂಗ್ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.


Stay up to date on all the latest ದೇಶ news
Poll
Parliament

2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷ ಯಾವುದು ಎಂದು ನೀವು ಭಾವಿಸುತ್ತೀರಿ?


Result
ಕಾಂಗ್ರೆಸ್
ಎಎಪಿ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp