ಭಾರತ-ಉಕ್ರೇನ್ ನಡುವೆ ವಿಮಾನ ಹಾರಾಟ: ನಾಗರಿಕ ವಿಮಾನಯಾನ ಸಚಿವಾಲಯದಿಂದ ನಿರ್ಬಂಧಗಳ ತೆರವು

ನಾಗರಿಕ ವಿಮಾನಯಾನ ಸಚಿವಾಲಯವು ಪೂರ್ವ ಯುರೋಪಿಯನ್ ರಾಷ್ಟ್ರದಿಂದ ಭಾರತೀಯರ ಪ್ರಯಾಣಕ್ಕೆ ಅನುಕೂಲವಾಗುವಂತೆ ದ್ವಿಪಕ್ಷೀಯ ವಾಯುಸಂಚಾರ ವ್ಯವಸ್ಥೆಯಡಿ(Air bubble) ಭಾರತ ಮತ್ತು ಉಕ್ರೇನ್ ನಡುವೆ ಕಾರ್ಯನಿರ್ವಹಿಸಬಹುದಾದ ವಿಮಾನಗಳ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕಿದೆ.

Published: 17th February 2022 12:58 PM  |   Last Updated: 17th February 2022 01:31 PM   |  A+A-


Ukrainian President Volodymyr Zelenskyy, center left, inspects anti-aircraft weapons during a military drill outside the city of Rivne, northern Ukraine.

ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪರಿಶೀಲಿಸುತ್ತಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ

PTI

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಪೂರ್ವ ಯುರೋಪಿಯನ್ ರಾಷ್ಟ್ರದಿಂದ ಭಾರತೀಯರ ಪ್ರಯಾಣಕ್ಕೆ ಅನುಕೂಲವಾಗುವಂತೆ ದ್ವಿಪಕ್ಷೀಯ ವಾಯುಸಂಚಾರ ವ್ಯವಸ್ಥೆಯಡಿ(Air bubble) ಭಾರತ ಮತ್ತು ಉಕ್ರೇನ್ ನಡುವೆ ಕಾರ್ಯನಿರ್ವಹಿಸಬಹುದಾದ ವಿಮಾನಗಳ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕಿದೆ.

ರಷ್ಯಾ ಜೊತೆಗಿನ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಉಕ್ರೇನ್‌ನಲ್ಲಿ ಈಗಿರುವ ಪರಿಸ್ಥಿತಿಯ ನಡುವೆ, ಭಾರತವು ತನ್ನ ನಾಗರಿಕರಿಗೆ ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಸಲಹೆ ನೀಡಿದೆ. ಏರ್ ಬಬಲ್ ವ್ಯವಸ್ಥೆ ಅಡಿಯಲ್ಲಿ ಭಾರತ ಮತ್ತು ಉಕ್ರೇನ್ ನಡುವಿನ ಸೀಮಿತ ಸಂಖ್ಯೆಯಲ್ಲಿ ವಿಮಾನಗಳ ಹಾರಾಟ ಮೇಲಿನ ನಿರ್ಬಂಧಗಳನ್ನು ಸಚಿವಾಲಯ ತೆಗೆದುಹಾಕಿದೆ.

ಚಾರ್ಟರ್ಡ್ ವಿಮಾನಗಳು(Chartered flights) ಸೇರಿದಂತೆ ಯಾವುದೇ ವಿಮಾನಗಳನ್ನು ಉಭಯ ದೇಶಗಳ ನಡುವೆ ಕಾರ್ಯನಿರ್ವಹಿಸಬಹುದಾಗಿದೆ. ಬೇಡಿಕೆಯ ಹೆಚ್ಚಳದಿಂದಾಗಿ ಉಕ್ರೇನ್‌ಗೆ ವಿಮಾನಗಳ ಹಾರಾಟ ನಡೆಸಲು ವಿದೇಶಾಂಗ ಸಚಿವಾಲಯಗಳನ್ನು ಕೇಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಚಿವಾಲಯವು ವಿಮಾನ ಸೇವೆಗಳಿಗೆ ಸಂಬಂಧಿಸಿದಂತೆ ವಿದೇಶಾಂಗ ಸಚಿವಾಲಯದೊಂದಿಗೆ (MEA) ಸಮನ್ವಯ ಸಾಧಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ನಲ್ಲಿನ ಪರಿಸ್ಥಿತಿ ಮೌಲ್ಯಮಾಪನದ ಬಗ್ಗೆ ಭಾರತಕ್ಕೆ ಯುರೋಪಿಯನ್ ಒಕ್ಕೂಟ ಮಾಹಿತಿ

ಹೆಚ್ಚುವರಿ ಬೇಡಿಕೆಯನ್ನು ಪೂರೈಸಲು ಮುಂದಿನ ದಿನಗಳಲ್ಲಿ ಹೆಚ್ಚಿನ ವಿಮಾನಗಳನ್ನು ಯೋಜಿಸಲಾಗುತ್ತಿದೆ ಎಂದು ಕೈವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಭಾರತದ ರಾಯಭಾರ ಕಚೇರಿಯು ಉಕ್ರೇನ್‌ನಿಂದ ಭಾರತಕ್ಕೆ ವಿಮಾನಗಳ ಲಭ್ಯತೆಯಿಲ್ಲದ ಕುರಿತು ಹಲವಾರು ಮನವಿಗಳನ್ನು ಸ್ವೀಕರಿಸುತ್ತಿದೆ. ಈ ನಿಟ್ಟಿನಲ್ಲಿ, ವಿದ್ಯಾರ್ಥಿಗಳು ಭಯಭೀತರಾಗಬೇಡಿ, ಭಾರತಕ್ಕೆ ಪ್ರಯಾಣಿಸಲು ಲಭ್ಯವಿರುವ ಮತ್ತು ಅನುಕೂಲಕರ ವಿಮಾನಗಳನ್ನು ಕಾಯ್ದಿರಿಸಿ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಉಕ್ರೇನ್ ನ ಇಂಟರ್‌ನ್ಯಾಶನಲ್ ಏರ್‌ಲೈನ್ಸ್, ಏರ್ ಅರೇಬಿಯಾ, ಫ್ಲೈ ದುಬೈ ಮತ್ತು ಕತಾರ್ ಏರ್‌ವೇಸ್ ಪ್ರಸ್ತುತ ಉಕ್ರೇನ್‌ನಿಂದ ಹಾರಾಟ ನಡೆಸುತ್ತಿವೆ. ಹೆಚ್ಚುವರಿ ಬೇಡಿಕೆಯನ್ನು ಪೂರೈಸಲು, ಉಕ್ರೇನಿಯನ್ ಇಂಟರ್‌ನ್ಯಾಶನಲ್ ಏರ್‌ಲೈನ್ಸ್, ಏರ್ ಇಂಡಿಯಾ, ಇತ್ಯಾದಿಗಳನ್ನು ಒಳಗೊಂಡಂತೆ ಮುಂದಿನ ದಿನಗಳಲ್ಲಿ ಹೆಚ್ಚಿನ ವಿಮಾನಗಳನ್ನು ಹಾರಾಟಕ್ಕೆ ತರಲು ಯೋಜಿಸಲಾಗುತ್ತದೆ. ದೃಢೀಕರಿಸಿದ ನಂತರ ರಾಯಭಾರ ಕಚೇರಿಯು ಅದರ ವಿವರಗಳನ್ನು ನೀಡುತ್ತದೆ ಎಂದಿದ್ದಾರೆ.

ಪ್ರಸ್ತುತ ಪರಿಸ್ಥಿತಿಯ ಅನಿಶ್ಚಿತತೆಯ ದೃಷ್ಟಿಯಿಂದ ಆ ದೇಶವನ್ನು ತಾತ್ಕಾಲಿಕವಾಗಿ ತೊರೆಯುವಂತೆ ರಾಯಭಾರ ಕಚೇರಿಯು ಭಾರತೀಯ ನಾಗರಿಕರಿಗೆ, ವಿಶೇಷವಾಗಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿತ್ತು. 

ಎರಡು ದೇಶಗಳ ನಡುವಿನ ಏರ್ ಬಬಲ್ ವ್ಯವಸ್ಥೆಯಲ್ಲಿ, ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನಗಳನ್ನು ಕೆಲವು ಷರತ್ತುಗಳಿಗೆ ಒಳಪಟ್ಟು ಪರಸ್ಪರರ ಪ್ರಾಂತ್ಯಗಳಲ್ಲಿ ಹಾರಾಟಕ್ಕೆ ಬಿಡಬಹುದು. ಪ್ರಸ್ತುತ, ಭಾರತವು 35 ದೇಶಗಳೊಂದಿಗೆ ಏರ್ ಬಬಲ್ ವ್ಯವಸ್ಥೆಯನ್ನು ಹೊಂದಿದೆ.

ಮಾರ್ಚ್ 23, 2020ರಿಂದ ಭಾರತಕ್ಕೆ ಮತ್ತು ಭಾರತದಿಂದ ನಿಗದಿತ ಅಂತರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ.


Stay up to date on all the latest ದೇಶ news
Poll
Kharge-tharoor

ಕಾಂಗ್ರೆಸ್ ಎದುರಿಸುತ್ತಿರುವ ಸವಾಲುಗಳನ್ನು ನಿಭಾಯಿಸಲು ಯಾರು ಹೆಚ್ಚು ಸೂಕ್ತರು?


Result
ಮಲ್ಲಿಕಾರ್ಜುನ ಖರ್ಗೆ
ಶಶಿ ತರೂರ್

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp