ರಾಜ್ಯಗಳ ಬಳಿ 11.73 ಕೋಟಿ ಡೋಸ್ ಬಳಕೆಯಾಗದ ಕೋವಿಡ್ ಲಸಿಕೆಗಳಿವೆ: ಕೇಂದ್ರ ಸರ್ಕಾರ
ಕೇಂದ್ರಾಡಳಿತ ಮತ್ತು ರಾಜ್ಯ ಸರ್ಕಾರಗಳ ಬಳಿ ಇನ್ನೂ 11.73 ಕೋಟಿ ಡೋಸ್ ಬಳಕೆಯಾಗದ ಕೋವಿಡ್ ಲಸಿಕೆಗಳಿವೆ ಗುರುವಾರ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
Published: 17th February 2022 12:39 PM | Last Updated: 17th February 2022 12:39 PM | A+A A-

ಸಂಗ್ರಹ ಚಿತ್ರ
ನವದೆಹಲಿ: ಕೇಂದ್ರಾಡಳಿತ ಮತ್ತು ರಾಜ್ಯ ಸರ್ಕಾರಗಳ ಬಳಿ ಇನ್ನೂ 11.73 ಕೋಟಿ ಡೋಸ್ ಬಳಕೆಯಾಗದ ಕೋವಿಡ್ ಲಸಿಕೆಗಳಿವೆ ಗುರುವಾರ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ದೇಶಾದ್ಯಂತ ಕೋವಿಡ್ ಲಸಿಕೆ ನೀಡಿಕೆ ಅಭಿಯಾನ ಮುಂದುವರೆದಿದ್ದು, ಈ ವರೆಗೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 171.67 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ಹಂಚಿಕೆ ಮಾಡಲಾಗಿದೆ.
ಈ ಪೈಕಿ ಕೇಂದ್ರಾಡಳಿತ ಮತ್ತು ರಾಜ್ಯ ಸರ್ಕಾರಗಳ ಬಳಿ ಇನ್ನೂ 11.73 ಕೋಟಿ ಡೋಸ್ ಬಳಕೆಯಾಗದ ಕೋವಿಡ್ ಲಸಿಕೆಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ದೇಶದಲ್ಲಿ ಈ ವರೆಗೂ 1,74,24,36,288 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.