ಕುಶಿನಗರ ಮದುವೆ ಸಮಾರಂಭದಲ್ಲಿ ದುರಂತ: ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ
ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ನೆಬುವಾ ನೌರಂಗಿಯಾ ಪ್ರದೇಶದಲ್ಲಿ ವಿವಾಹ ಮಹೋತ್ಸವದ ವೇಳೆ ಬಾವಿಗೆ ಬಿದ್ದು 13 ಮಂದಿ ದುರ್ಮರಣವನ್ನಪ್ಪಿದ ಪ್ರಕರಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
Published: 17th February 2022 08:49 AM | Last Updated: 17th February 2022 01:21 PM | A+A A-

ಪ್ರಧಾನಿ ಮೋದಿ
ನವದೆಹಲಿ: ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ನೆಬುವಾ ನೌರಂಗಿಯಾ ಪ್ರದೇಶದಲ್ಲಿ ವಿವಾಹ ಮಹೋತ್ಸವದ ವೇಳೆ ಬಾವಿಗೆ ಬಿದ್ದು 13 ಮಂದಿ ದುರ್ಮರಣವನ್ನಪ್ಪಿದ ಪ್ರಕರಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ದುರ್ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಉತ್ತರ ಪ್ರದೇಶದ ಕುಶಿನಗರದಲ್ಲಿ ಸಂಭವಿಸಿದ ಘಟನೆ ಹೃದಯ ವಿದ್ರಾವಕವಾಗಿದೆ. ಘಟನೆಯಲ್ಲಿ ತಮ್ಮ ಕುಟುಂಬಸ್ಥರನ್ನು ಕಳೆದುಕೊಂಡವರಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸ್ಥಳೀಯ ಆಡಳಿತ ಮಂಡಳಿ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ವಿವಾಹ ಸಮಾರಂಭದಲ್ಲಿ ದುರಂತ: ಗಂಗೆ ಪೂಜೆ ವೇಳೆ ಬಾವಿಗೆ ಬಿದ್ದು 13 ಮಂದಿ ದುರ್ಮರಣ!
ಅಲ್ಲದೆ, ದುರ್ಘಟನೆಯಲ್ಲಿ ಕುಟುಂಬಸ್ಥರನ್ನು ಕಳೆದುಕೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.
ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಹಾಗೂ ಗಾಯಾಳುಗಳಿಗೆ ರೂ.50 ಸಾವಿರ ನೀಡುವುದಾಗಿ ಘೋಷಿಸಿದ್ದಾರೆ.