ಶೋಪಿಯಾನ್ ಜಿಲ್ಲೆಯಲ್ಲಿ ಎನ್ಕೌಂಟರ್: ಓರ್ವ ಉಗ್ರನ ಹೊಡೆದುರುಳಿಸಿದ ಸೇನಾಪಡೆ
ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಝೈನಾಪೋರಾ ಪ್ರದೇಶದ ಚೆರ್ಮಾರ್ಗ್ನಲ್ಲಿ ಶನಿವಾರ ಬೆಳಗ್ಗೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Published: 19th February 2022 09:39 AM | Last Updated: 19th February 2022 11:29 AM | A+A A-

ಸಂಗ್ರಹ ಚಿತ್ರ
ಶೋಪಿಯಾನ್: ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಝೈನಾಪೋರಾ ಪ್ರದೇಶದ ಚೆರ್ಮಾರ್ಗ್ನಲ್ಲಿ ಶನಿವಾರ ಬೆಳಗ್ಗೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಶೋಪಿಯಾನ್ನ ಚೆರ್ಮಾರ್ಗ್, ಝೈನಾಪೋರಾ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಶ್ರೀನಗರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ
ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಉಗ್ರರಿರುವ ಪ್ರದೇಶವನ್ನು ಸುತ್ತುವರೆದಿವೆ. ಉಗ್ರಗಾಮಿಗಳ ಉಪಸ್ಥಿತಿಯ ಬಗ್ಗೆ ನಿಖರ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದ್ದು, ಗುಂಡಿನ ಚಕಮಕಿ ನಡೆಯುತ್ತಿದ್ದು, ಒಬ್ಬ ಭಯೋತ್ಪಾಕನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.