ಪುಲ್ವಾಮಾ: ಇಬ್ಬರು ಭಯೋತ್ಪಾದಕ ಸಹಚರರನ್ನು ಬಂಧಿಸಿದ ಪೊಲೀಸರು
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಶ್ರೀನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 20th February 2022 01:07 AM | Last Updated: 20th February 2022 01:07 AM | A+A A-

ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಶ್ರೀನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ, ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ರಹಮೂ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಶೋಧದ ವೇಳೆ, ನಿಷೇಧಿತ ಜೈಶ್-ಎ-ಮೊಹಮ್ಮದ್(ಜೆಇಎಂ) ನ ಭಯೋತ್ಪಾದಕ ಸಹಚರ ಪುಲ್ವಾಮಾದ ರೋಹಮೂದ ಇರ್ಫಾನ್ ಯೂಸುಫ್ ದಾರ್ ನನ್ನು ಬಂಧಿಸಲಾಗಿದೆ.
ಬಂಧಿತನಿಂದ ಎಕೆ ರೈಫಲ್, ಮ್ಯಾಗಜೀನ್ ಮತ್ತು 30 ಸುತ್ತುಗಳು ಸೇರಿದಂತೆ ದೋಷಾರೋಪಣೆಯ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಪತ್ತೆಯಾಗಿವೆ.
ಇದೇ ರೀತಿಯ ಕಾರ್ಯಾಚರಣೆಯಲ್ಲಿ ಎಲ್ಇಟಿ/ಟಿಆರ್ಎಫ್ನ ಭಯೋತ್ಪಾದಕ ಸಹಚರನನ್ನು ನಗರದ ಈದ್ಗಾ ಪ್ರದೇಶದಲ್ಲಿ ಬಂಧಿಸಲಾಗಿದ್ದು ಆತನ ಬಳಿ ಪಿಸ್ತೂಲ್ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಈತನನ್ನು ಕುಲ್ಗಾಮ್ನ ನಿಲ್ಲೋವಿನ ಜುನೈದ್ ಮುಷ್ತಾಕ್ ಭಟ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ವೇಳೆ ಭಟ್ ಭಯೋತ್ಪಾದಕ ಘಟನೆಗಳು ಮತ್ತು ಹತ್ಯೆಗಳನ್ನು ನಡೆಸಲು ನಗರಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ. ಪ್ರಕರಣಗಳು ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದರು.