ಮೇವು ಹಗರಣ: ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದ ಸಿಬಿಐ ಕೋರ್ಟ್
ಬಹುಕೋಟಿ ರೂಪಾಯಿ ಮೇವು ಹಗರಣದ ದೋಷಿ ಎಂದು ಸಾಬೀತಾಗಿದ್ದ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ 5 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.
Published: 21st February 2022 03:39 PM | Last Updated: 21st February 2022 03:39 PM | A+A A-

ಕ್ಷೀಣಿಸಿದ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಆರೋಗ್ಯ ದೆಹಲಿ ಏಮ್ಸ್ ಗೆ ದಾಖಲು ಸಾಧ್ಯತೆ
ರಾಂಚಿ: ಬಹುಕೋಟಿ ರೂಪಾಯಿ ಮೇವು ಹಗರಣದ ದೋಷಿ ಎಂದು ಸಾಬೀತಾಗಿದ್ದ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ 5 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.
ಇದನ್ನೂ ಓದಿ: ಕುಟುಂಬ ರಾಜಕಾರಣ ಟೀಕೆ: ಮೋದಿ, ನಿತೀಶ್ ಕುಮಾರ್ ಗೆ ಮಕ್ಕಳಾಗಲಿ ಎಂದು ಪ್ರಾರ್ಥಿಸುವೆ- ಲಾಲೂ ತಿರುಗೇಟು
ಮೇವು ಹಗರಣದ 139 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಪ್ರಸಾದ್ ಯಾದವ್ ತಪ್ಪಿತಸ್ಥ ಎಂದು ಈ ಹಿಂದೆ ಸಿಬಿಐ ನ್ಯಾಯಾಲಯ ತೀರ್ಪು ನೀಡಿತ್ತು. ಇದೀಗ ಶಿಕ್ಷೆ ಪ್ರಮಾಣ ಘೋಷಣೆ ಮಾಡಿದ್ದು, ಲಾಲ್ ಪ್ರಸಾದ್ ಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಇದನ್ನೂ ಓದಿ: ಬಹುಕೋಟಿ ರೂ. ಮೇವು ಹಗರಣ: ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ದೋಷಿ; ವಿಶೇಷ ಸಿಬಿಐ ಕೋರ್ಟ್ ತೀರ್ಪು
ಸಿಬಿಐ ವಿಶೇಷ ನ್ಯಾಯಾಧೀಶ ಎಸ್ಕೆ ಶಶಿ ಅವರು 6 ಮಹಿಳೆಯರು ಸೇರಿದಂತೆ 24 ಆರೋಪಿಗಳನ್ನು ಸಾಕಷ್ಟು ಸಾಕ್ಷ್ಯಾಧಾರಗಳಿಲ್ಲದ ಕಾರಣ ಖುಲಾಸೆಗೊಳಿಸಲಾಗಿತ್ತು. ಲಾಲೂ ಪ್ರಸಾದ್ ಯಾದವ್ ಅವರಿಗೆ ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ 18 ರಂದು ಘೋಷಿಸಲಾಗುವುದು ಎಂದು ನ್ಯಾಯಾಲಯ ಇಂದು ತೀರ್ಪು ವೇಳೆ ಪ್ರಕಟಿಸಿತ್ತು. ಶಿಕ್ಷೆಯ ಪ್ರಮಾಣದ ಬಗ್ಗೆ ವಾಸ್ತವಿಕವಾಗಿ ವಾದಗಳನ್ನು ಆಲಿಸಿದ ನಂತರ ನ್ಯಾಯಾಲಯವು ಈ ಶಿಕ್ಷೆಯನ್ನು ಘೋಷಿಸಿತು.
ಇದನ್ನೂ ಓದಿ: ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ಗೆ ಜ್ವರ: ಏಮ್ಸ್ ಆಸ್ಪತ್ರೆಗೆ ದಾಖಲು
ಫೆಬ್ರವರಿ 15 ರಂದು ಪ್ರಕರಣದಲ್ಲಿ ಶಿಕ್ಷೆಯ ನಂತರ, ಅನಾರೋಗ್ಯದಿಂದ ಬಳಲುತ್ತಿರುವ 73 ವರ್ಷದ ಬಿಹಾರದ ಮಾಜಿ ಮುಖ್ಯಮಂತ್ರಿಯನ್ನು ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ನಂತರ ಅನಾರೋಗ್ಯ ಕಾರಣದಿಂದಾಗಿ ರಾಂಚಿಯ ಸರ್ಕಾರಿ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS) ಗೆ ಸ್ಥಳಾಂತರಿಸಲಾಯಿತು.