ಉತ್ತರ ಪ್ರದೇಶ ಚುನಾವಣೆ: 4ನೇ ಹಂತದ ಮತದಾನ ಆರಂಭ, 624 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಉತ್ತರ ಪ್ರದೇಶದ 9 ಜಿಲ್ಲೆಗಳಲ್ಲಿ ವ್ಯಾಪಿಸಿಕೊಂಡಿರುವ 59 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಆರಂಭಗೊಂಡಿದ್ದು, 4ನೇ ಹಂತದಲ್ಲಿ ನಡೆಯುತ್ತಿರುವ ಈ ಕ್ಷೇತ್ರಗಳಲ್ಲಿ ಬಿಜೆಪಿ, ಎಸ್'ಪಿ, ಕಾಂಗ್ರೆಸ್, ಬಿಎಸ್'ಪಿ ಸೇರಿ 625 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ.
Published: 23rd February 2022 08:39 AM | Last Updated: 23rd February 2022 01:04 PM | A+A A-

ಮತದಾನ ಮಾಡಲು ಸಾಲಿನಲ್ಲಿ ನಿಂತಿರುವ ಜನತೆ.
ಲಖನೌ: ಉತ್ತರ ಪ್ರದೇಶದ 9 ಜಿಲ್ಲೆಗಳಲ್ಲಿ ವ್ಯಾಪಿಸಿಕೊಂಡಿರುವ 59 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಆರಂಭಗೊಂಡಿದ್ದು, 4ನೇ ಹಂತದಲ್ಲಿ ನಡೆಯುತ್ತಿರುವ ಈ ಕ್ಷೇತ್ರಗಳಲ್ಲಿ ಬಿಜೆಪಿ, ಎಸ್'ಪಿ, ಕಾಂಗ್ರೆಸ್, ಬಿಎಸ್'ಪಿ ಸೇರಿ 625 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ.
ಕಳೆದ ವರ್ಷದ ಅಕ್ಟೋಬರ್ 3ರಂದು ಕಾರು ಹರಿದು ನಾಲ್ವರು ರೈತರು ಸೇರಿ 8 ಮಂದಿ ಸಾವನ್ನಪ್ಪಿದ ಘಟನೆಯಿಂದ ರಾಷ್ಟ್ರ ಮಟ್ಟದಲ್ಲಿ ಕುಖ್ಯಾತಿ ಪಡೆದ ಲಖಿಂಪುರ ಜಿಲ್ಲೆ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ 4ನೇ ಹಂತದ ಚುನಾವಣೆ ನಡಯಲಿದೆ. ಬಳಿಕ ಇನ್ನೂ 3 ಹಂತದ ಚುನಾವಣೆ ಬಾಕಿ ಉಳಿಯಲಿವ. ಮಾ.10ಕ್ಕೆ ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ: ದೇವಿ ಲಕ್ಷ್ಮಿ ಕಮಲದ ಮೇಲೆ ಬರುತ್ತಾಳೆಯೇ ಹೊರತು 'ಆನೆ' ಅಥವಾ 'ಸೈಕಲ್' ಮೇಲಲ್ಲ: ರಾಜನಾಥ್ ಸಿಂಗ್
ಕೋವಿಡ್19 ಸುರಕ್ಷತೆಯ ಮಾರ್ಗಸೂಚಿಗಳ ಪ್ರಕಾರ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭಗೊಂಡಿದ್ದು, ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಲಿದೆ.
ಕೊರೊನಾ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ರೋಡ್ಶೋಗಳು ಮತ್ತು ಭೌತಿಕ ರ್ಯಾಲಿಗಳ ಮೇಲೆ ನಿರ್ಬಂಧ ವಿಧಿಸಿತ್ತು. ಇದರ ಪರಿಣಾಮವಾಗಿ ರಾಜಕೀಯ ಪಕ್ಷಗಳು ವರ್ಚುವಲ್ ಮಾಧ್ಯಮವನ್ನು ಬಳಸಿಕೊಂಡು ಪ್ರಚಾರ ನಡೆಸಿದ್ದವು. ಹೆಚ್ಚಾಗಿ ಮನೆ ಮನೆ ಪ್ರಚಾರಕ್ಕೆ ಆದ್ಯತೆ ನೀಡಲಾಗಿತ್ತು.