
ಸಾಂದರ್ಭಿಕ ಚಿತ್ರ
ರಾಂಚಿ: ಜಾರ್ಖಂಡ್ ನಲ್ಲಿ ಪ್ರಯಾಣಿಕ ದೋಣಿ ಮುಳುಗಿ ದುರಂತ ಸಂಭವಿಸಿದ್ದು, ಕನಿಷ್ಠ 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಜಾರ್ಖಂಡ್ನ ಜಮ್ತಾರಾದ ದಾಮೋದರ್ ನದಿಯ ಬಾರ್ಬೆಂಡಿಯಾ ಸೇತುವೆಯ ಬಳಿ ಶುಕ್ರವಾರ ದೋಣಿ ಮುಳುಗಿ ಈ ದುರಂತ ಸಂಭವಿಸಿದೆ. ಈ ವೇಳೆ ಕನಿಷ್ಠ 16 ಮಂದಿ ನಾಪತ್ತೆಯಾಗಿದ್ದು, ಐವರನ್ನು ರಕ್ಷಿಸಲಾಗಿದೆ.
ವಿಚಾರ ತಿಳಿದ ಕೂಡಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮೂಲಗಳ ಪ್ರಕಾರ ಜಾರ್ಖಂಡ್ನ ಧನ್ಬಾದ್ ಜಿಲ್ಲೆಯ ನಿರ್ಸಾ ಪ್ರದೇಶದಿಂದ ದಾಮೋದರ್ ನದಿಯಲ್ಲಿ ಜಾಮ್ತಾರಾಕ್ಕೆ ದೋಣಿ ಹೋಗುತ್ತಿತ್ತು. ಗುರುವಾರ ಜಾರ್ಖಂಡ್ನ ಬಾರ್ಬೆಂಡಿಯಾ ಸೇತುವೆ ಬಳಿ ಬಿರುಗಾಳಿಯಿಂದಾಗಿ ದೋಣಿ ಮಗುಚಿ ಬಿದ್ದಿದೆ ಎಂದು ಜಮ್ತಾರಾ ಜಿಲ್ಲಾಡಳಿತ ತಿಳಿಸಿದೆ.