
ಸಾಂದರ್ಭಿಕ ಚಿತ್ರ
ಭುವನೇಶ್ವರ: ಒಡಿಶಾದ ಜೈಪೋರ್ ಎಂಬಲ್ಲಿ ಇತ್ತೀಚಿಗೆ ವರದಿಯಾದ ಅತ್ಯಾಚಾರ ಪ್ರಕರಣ ಜನಮಾನಸದಿಂದ ಮಾಸುವ ಮುನ್ನವೇ ಜೈಪೋರ್ ಬಳಿಯ ಕೋರಪುಟ್ ಕಾಡಿನಲ್ಲಿ ಯುವತಿಯ ನಗ್ನ ಮೃತದೇಹ ಪತ್ತೆಯಾಗಿದೆ.
ಇದನ್ನೂ ಓದಿ: ಜೀವಾವಧಿ ಶಿಕ್ಷೆ ವಿಧಿಸಿದಕ್ಕೆ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಅಪರಾಧಿ
ಇದರಿಂದಾಗಿ ಆ ಪ್ರದೇಶದಲ್ಲಿ ಹಲವು ಊಹಾಪೋಹಗಳು ಹರಿದಾಡುತ್ತಿರುವುದು ಕಂಡುಬಂದಿದೆ. ಪತ್ತೆಯಾದ ಮೃತದೇಹದ ಗುರುತು ಪತ್ತೆಯಾಗಿದ್ದು ಹತ್ತಿರದ ಚಿಲ್ಲಿಗುಡ ಗ್ರಾಮದ 20 ವರ್ಷದ ಯುವತಿಯದ್ದು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಮುಜಾಫರ್ ನಗರದಲ್ಲಿ 10 ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
ಮೃತ ಯುವತಿ ಸ್ಥಳೀಯ ಗೇರುಬೀಜ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯನ್ನು ಅತ್ಯಾಚಾರ ಎಸಗಿ, ಕೊಲೆ ಮಾಡಿ ಮೃತದೇಹ ಎಸೆದಿರುವುದಾಗಿ ಸ್ಥಳೀಯರು ಶಂಕಿಸಿದ್ದಾರೆ.
ಇದನ್ನೂ ಓದಿ: 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 14 ವರ್ಷದ ಬಾಲಕ