
ಸಂಗ್ರಹ ಚಿತ್ರ
ಬುದ್ಗಾಂ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.
ಬುದ್ಗಾಂನ ಝೋಲ್ವಾ ಕ್ರಾಲ್ಪೋರಾ ಚದೂರ ಪ್ರದೇಶ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸ್ಥಳದಲ್ಲಿ ಸೇನಾಪಡೆ ಕಾರ್ಯಾಚರಣೆ ಆರಂಭಿಸಿತ್ತು.
ಇದನ್ನೂ ಓದಿ: ಕಾಶ್ಮೀರ ಎನ್ಕೌಂಟರ್ ನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಸಲೀಂ ಪರ್ರೇ ಹತ
ಈ ವೇಳೆ ಅಡಗಿಕುಳಿತಿದ್ದ ಉಗ್ರರು ಯೋಧರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಸ್ಥಳವನ್ನು ಸುತ್ತಿವರೆದ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರಂದು ವರದಿಗಳು ತಿಳಿಸಿವೆ.
ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಹತ್ಯೆಯಾದ ಉಗ್ರರ ಗುರ್ತಿಕೆಯನ್ನು ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ.