ಅಯೋಧ್ಯೆ ಸಮೀಪ ಭೂಕಂಪನ: ಜನರಲ್ಲಿ ಹೆಚ್ಚಿದ ಆತಂಕ
ಉತ್ತರ ಪ್ರದೇಶದ ಆಯೋಧ್ಯೆ ಸಮೀಪ ಭೂಕಂಪ ಸಂಭವಿಸಿದೆ ಗುರುವಾರ ಮಧ್ಯ ರಾತ್ರಿ ಆಯೋಧ್ಯೆಯಲ್ಲಿ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಶುಕ್ರವಾರ ಬೆಳಗ್ಗೆ ತಿಳಿಸಿದೆ.
Published: 07th January 2022 08:57 AM | Last Updated: 07th January 2022 11:58 AM | A+A A-

ಸಂಗ್ರಹ ಚಿತ್ರ
ಅಯೋಧ್ಯೆ: ಉತ್ತರ ಪ್ರದೇಶದ ಆಯೋಧ್ಯೆ ಸಮೀಪ ಭೂಕಂಪ ಸಂಭವಿಸಿದೆ ಗುರುವಾರ ಮಧ್ಯ ರಾತ್ರಿ ಆಯೋಧ್ಯೆಯಲ್ಲಿ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಶುಕ್ರವಾರ ಬೆಳಗ್ಗೆ ತಿಳಿಸಿದೆ.
ಅಯೋಧ್ಯೆ ನಗರದಿಂದ 176 ಕಿ.ಮೀ ದೂರದಲ್ಲಿ ಸಂಭವಿಸಿದ ಭೂಕಂಪನದಿಂದ ಜನರು ಭಯಭೀತಗೊಂಡಿದ್ದಾರೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ 2 ಬಾರಿ ಭೂಕಂಪನ: ಹಲವು ಗ್ರಾಮದಲ್ಲಿ ಭಾರೀ ಸ್ಪೋಟದ ಶಬ್ದ
ಭೂ ಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಅಧಿಕಾರಿಗಳು ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಭೂಕಂಪನ 15 ಕಿಲೋಮೀಟರ್ ಆಳದಲ್ಲಿ ಕೇಂದ್ರೀಕೃತವಾಗಿದೆ ಎಂದು ಹೇಳಿದ್ದಾರೆ. ಗಾಢ ನಿದ್ರೆಯಲ್ಲಿದ್ದ ಜನರಿಗೆ ಭೂಕಂಪನ ತೀವ್ರ ಕಳವಳ ಸೃಷ್ಟಿಸಿದೆ.