ದೆಹಲಿಯಲ್ಲಿ ಇಂದು 20,181 ಕೊರೋನಾ ಪಾಸಿಟಿವ್ ಪ್ರಕರಣಗಳು, ಏಳು ಮಂದಿ ಸಾವು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶನಿವಾರ ಒಂದೇ ದಿನ 20,181 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಪಾಸಿಟಿವ್ ಪ್ರಮಾಣ ಶೇಕಡಾ 19.60ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ತಿಳಿಸಿದೆ.
Published: 09th January 2022 12:34 AM | Last Updated: 09th January 2022 12:34 AM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶನಿವಾರ ಒಂದೇ ದಿನ 20,181 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಪಾಸಿಟಿವ್ ಪ್ರಮಾಣ ಶೇಕಡಾ 19.60ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ತಿಳಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿ ಕಳೆದ ವರ್ಷ ಮೇ 2 ರಂದು 407 ಕೋವಿಡ್ -19 ಸಾವು ಮತ್ತು 20,394 ಪಾಸಿಟಿವ್ ಪ್ರಕರಣಗಳೊಂದಿಗೆ ಶೇ. 28.33 ಪಾಸಿಟಿವ್ ಪ್ರಮಾಣ ದಾಖಲಾಗಿತ್ತು.
ಇದನ್ನು ಓದಿ: ಕೊರೋನಾ ಅಬ್ಬರ: ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿ, ಮದುವೆಗೆ 50 ಮಂದಿಗೆ ಮಾತ್ರ ಅವಕಾಶ
ಹಿಂದಿನ ದಿನ 79,946 ಆರ್‌ಟಿ-ಪಿಸಿಆರ್ ಸೇರಿದಂತೆ ಒಟ್ಟು 1,02,965 ಪರೀಕ್ಷೆಗಳನ್ನು ನಡೆಸಲಾಗಿದ್ದು, ಉಳಿದವು ರ್ಯಾಪಿಡ್ ಆಂಟಿಜನ್ ಪರೀಕ್ಷೆಗಳಾಗಿವೆ.
ಸುಮಾರು 1,586 ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದು, 375 ರೋಗಿಗಳು ಆಮ್ಲಜನಕದ ಬೆಂಬಲದಲ್ಲಿದ್ದಾರೆ. 375 ರೋಗಿಗಳಲ್ಲಿ 27 ಮಂದಿ ವೆಂಟಿಲೇಟರ್‌ನಲ್ಲಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 48,178 ರಷ್ಟಿದೆ, ಅದರಲ್ಲಿ 25,909 ಜನರು ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ ಎಂದು ದೆಹಲಿ ಆರೋಗ್ಯ ಇಲಾಖೆ ತಿಳಿಸಿದೆ.