
ಜೆ.ಪಿ ನಡ್ಡಾ
ನವದೆಹಲಿ: ದೇಶಾದ್ಯಂತ ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದು, ಸೋಮವಾರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ನನಗೆ ಕೊರೋನಾ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಜೊತೆ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಜೆಪಿ ನಡ್ಡಾ ಅವರು ಮನವಿ ಮಾಡಿದ್ದಾರೆ.
ಇದನ್ನು ಓದಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಕೊರೋನಾ ಪಾಸಿಟಿವ್
ನಡ್ಡಾ ಅವರು ಕೋವಿಡ್ ರೋಗದ ಕೆಲವು ಲಕ್ಷಣಗಳು ಕಾಣಿಸಿಕೊಂಡ ನಂತರ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದು, ಪಾಸಿಟಿವ್ ಬಂದಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,79,723 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿಯಾಗಿದ್ದು, ಇದರೊಂದಿಗೆ ದೈನಂದಿನ ಪಾಸಿಟಿವ್ ಪ್ರಮಾಣ ಶೇಕಡಾ 13.29ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ತಿಳಿಸಿದೆ.