ಉತ್ತರ ಪ್ರದೇಶ: ಬಿಜೆಪಿಗೆ ಮತ್ತೊಂದು ಆಘಾತ; ಅರಣ್ಯ ಸಚಿವ ದಾರಾ ಸಿಂಗ್ ಚೌಹಾಣ್ ರಾಜೀನಾಮೆ
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬಿಜೆಪಿ ಮತ್ತೊಂದು ಆಘಾತ ಎದುರಾಗಿದ್ದು, ಸಚಿವ ದಾರಾ ಸಿಂಗ್ ಚೌಹಾಣ್ ರಾಜೀನಾಮೆ ನೀಡಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
Published: 12th January 2022 04:33 PM | Last Updated: 12th January 2022 05:32 PM | A+A A-

ದಾರಾ ಸಿಂಗ್ ಚೌಹಾಣ್ ರಾಜೀನಾಮೆ
ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬಿಜೆಪಿ ಮತ್ತೊಂದು ಆಘಾತ ಎದುರಾಗಿದ್ದು, ಸಚಿವ ದಾರಾ ಸಿಂಗ್ ಚೌಹಾಣ್ ರಾಜೀನಾಮೆ ನೀಡಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
Uttar Pradesh cabinet Minister and BJP leader Dara Singh Chauhan quits from his post pic.twitter.com/PWvCNUq4zm
— ANI UP/Uttarakhand (@ANINewsUP) January 12, 2022
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯಾನಾಥ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸರಣಿ ಆಘಾತಗಳು ಎದುರಾಗುತ್ತಿದ್ದು, ಒಬ್ಬರ ಹಿಂದೊಬ್ಬರಂತೆ ಸಚಿವರು, ಶಾಸಕರು ರಾಜಿನಾಮೆ ನೀಡುತ್ತಿದ್ದಾರೆ. ಈ ಹಿಂದೆ ಯೋಗಿ ಆದಿತ್ಯನಾಥ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ, ಪ್ರಭಾವಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಮಂಗಳವಾರ ಬಿಜೆಪಿ ತೊರೆದು ಸಮಾಜವಾದಿ ಪಕ್ಷವನ್ನು ಸೇರಿದ್ದರು. ಅವರೊಂದಿಗೆ ಶಾಸಕರಾದ ರೋಶನ್ ಲಾಲ್ ವರ್ಮಾ, ಭಗವತಿ ಸಾಗರ್ ಮತ್ತು ಬ್ರಿಜೇಶ್ ಪ್ರಜಾಪತಿ ಅವರೂ ಬಿಜೆಪಿ ಬಿಟ್ಟು ಎಸ್ಪಿಗೆ ಸೇರ್ಪಡೆಗೊಂಡಿದ್ದರು.
ಬಿಜೆಪಿಗೆ ಇಂದು ಮತ್ತೆ ಆಘಾತ ಎದುರಾಗಿದ್ದು, ಯೋಗಿ ಸರ್ಕಾರದಲ್ಲಿ ಸಚಿವರಾಗಿದ್ದ, ರಜಪೂತ್ ಸಮುದಾಯದ ಪ್ರಬಲ ನಾಯಕ ದಾರಾ ಸಿಂಗ್ ಚೌಹಾಣ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದಾರಾ ಸಿಂಗ್ ಚೌಹಾಣ್ ಅವರು ಯೋಗಿ ಸರ್ಕಾರದಲ್ಲಿ ಅರಣ್ಯ ಇಲಾಖೆಯನ್ನು ನಿಭಾಯಿಸುತ್ತಿದ್ದರು.
403 ಸದಸ್ಯ ಬಲವನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರ ವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.