ಸೈನಾ ನೆಹ್ವಾಲ್ ವಿರುದ್ಧ ಟ್ವೀಟ್: ನಟ ಸಿದ್ಧಾರ್ಥ್ ವಿರುದ್ಧ ಕೇಸ್ ದಾಖಲಿಸಿದ ಹೈದರಾಬಾದ್ ಪೊಲೀಸರು
ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಮತ್ತು ಬಿಜೆಪಿ ನಾಯಕಿ ಸೈನಾ ನೆಹ್ವಾಲ್ ಅವರ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡಿದ್ದ ನಟ ಸಿದ್ಧಾರ್ಥ್ ಅವರ ವಿರುದ್ಧ ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ.
Published: 12th January 2022 10:54 PM | Last Updated: 13th January 2022 01:45 PM | A+A A-

ನಟ ಸಿದ್ಧಾರ್ಥ್
ಹೈದರಾಬಾದ್: ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಮತ್ತು ಬಿಜೆಪಿ ನಾಯಕಿ ಸೈನಾ ನೆಹ್ವಾಲ್ ಅವರ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡಿದ್ದ ನಟ ಸಿದ್ಧಾರ್ಥ್ ಅವರ ವಿರುದ್ಧ ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ.
ಬ್ಯಾಡ್ಮಿಂಟನ್ ಆಟಗಾರ್ತಿಯ ವಿರುದ್ಧ ಟ್ವೀಟ್ ಮಾಡಿದ್ದ ನಟ ಸಿದ್ಧಾರ್ಥ್ ಅವರ ವಿರುದ್ಧ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 509(ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಮಾತು, ಹಾವಭಾವ ಅಥವಾ ಕೃತ್ಯ) ಮತ್ತು ಸಂಬಂಧಿತ ಇತರ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಕಾಯ್ದೆ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಇದನ್ನು ಓದಿ: ಸಿದ್ಧಾರ್ಥ್ ಕ್ಷಮೆ ಕೋರಿದ್ದು ಸಂತಸ ತಂದಿದೆ: ಸೈನಾ ನೆಹ್ವಾಲ್
ಕೆಲವೇ ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್ನಲ್ಲಿ ಭದ್ರತಾ ಲೋಪ ಉಂಟಾಗಿತ್ತು. ಈ ವಿಚಾರ ಕುರಿತು ಸೈನಾ ನೆಹ್ವಾಲ್ ಟ್ವೀಟ್ ಮಾಡಿದ್ದರು.
‘’ತನ್ನ ದೇಶದ ಪ್ರಧಾನಿಯ ಭದ್ರತೆಯಲ್ಲಿ ಯಾವುದೇ ದೇಶ ರಾಜಿ ಮಾಡಿಕೊಳ್ಳುವುದಿಲ್ಲ. ಪ್ರಧಾನಿ ಮೋದಿ ಅವರಿಗೆ ಪಂಜಾಬ್ನಲ್ಲಿ ಉಂಟಾದ ಭದ್ರತಾ ಲೋಪವನ್ನು ನಾನು ಕಟು ಪದಗಳಿಂದ ಟೀಕಿಸುತ್ತೇನೆ’’ ಎಂದು ಸೈನಾ ನೆಹ್ವಾಲ್ ಟ್ವೀಟ್ ಮಾಡಿದ್ದರು. ಸೈನಾ ನೆಹ್ವಾಲ್ ಅವರ ಈ ಟ್ವೀಟ್ಗೆ ನಟ ಸಿದ್ದಾರ್ಥ್ ಪ್ರತಿಕ್ರಿಯೆ ಕೊಟ್ಟಿದ್ದರು.
‘’Subtle cock champion of the world.. ಭಾರತವು ರಕ್ಷಕರನ್ನು ಹೊಂದಿರುವುದಕ್ಕೆ ದೇವರಿಗೆ ಧನ್ಯವಾದಗಳು. ಶೇಮ್ ಆನ್ ಯೂ ರಿಹಾನ್ನಾ’’ ಎಂದು ಸೈನಾ ನೆಹ್ವಾಲ್ ಟ್ವೀಟ್ಗೆ ನಟ ಸಿದ್ದಾರ್ಥ್ ರಿಪ್ಲೈ ಮಾಡಿದ್ದರು. ಸಿದ್ದಾರ್ಥ್ ಅವರ ಈ ಟ್ವೀಟ್ಗೆ ಭಾರೀ ಪ್ರತಿರೋಧ ವ್ಯಕ್ತವಾಗಿತ್ತು. ಬಳಿಕ ಸಿದ್ಧಾರ್ಥ್ ಅವರು ಸೈನಾ ನೆಹ್ವಾಲ್ ಅವರ ಕ್ಷಮೆ ಕೋರಿದ್ದರು.