ಉತ್ತರಪ್ರದೇಶ: ಬಿಜೆಪಿ ತೊರೆದ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದರು. ಅದರಲ್ಲಿ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ದಲಿತರು, ರೈತರು, ನಿರುದ್ಯೋಗಿ ಯುವಕರ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದರು.
Published: 12th January 2022 06:54 PM | Last Updated: 12th January 2022 07:22 PM | A+A A-

ಸ್ವಾಮಿ ಪ್ರಸಾದ್ ಮೌರ್ಯ
ಲಖನೌ: ಬಿಜೆಪಿ ತೊರೆದು ಉತ್ತರಪ್ರದೇಶ ಯೋಗಿ ಸಂಪುಟಕ್ಕೆ ಶಾಕ್ ಕೊಟ್ಟಿದ್ದ ಮಾಜಿ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ. ಪಕ್ಷಕ್ಕೆ ರಾಜೀನಾಮೆ ನೀಡಿದ ಒಂದು ದಿನದೊಳಗೆ ಈ ಬೆಳವಣಿಗೆ ನಡೆದಿದ್ದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಇದನ್ನೂ ಓದಿ: ಮತದಾರರನ್ನು ಕರೆದೊಯ್ಯಲು ಹೆಲಿಕ್ಯಾಫ್ಟರ್ ವ್ಯವಸ್ಥೆ!
ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದರು. ಅದರಲ್ಲಿ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ದಲಿತರು, ರೈತರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳು ಮತ್ತು ನಿರುದ್ಯೋಗಿ ಯುವಕರ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದರು.
दलितों, पिछड़ों, किसानों, बेरोजगार नौजवानों एवं छोटे-लघु एवं मध्यम श्रेणी के व्यापारियों की घोर उपेक्षात्मक रवैये के कारण उत्तर प्रदेश के योगी मंत्रिमंडल से इस्तीफा देता हूं। pic.twitter.com/ubw4oKMK7t
— Swami Prasad Maurya (@SwamiPMaurya) January 11, 2022
ಇದನ್ನೂ ಓದಿ: ಮಗಳು ಹೇಳಿದಂತೆ ನಾನು ಕಿಡ್ನ್ಯಾಪ್ ಆಗಿಲ್ಲ, ಸಮಾಜವಾದಿ ಪಕ್ಷ ಸೇರಲು ನಿಶ್ಚಯಿಸಿದ್ದೇನೆ: ಬಿಜೆಪಿ ಶಾಸಕ ವಿನಯ್ ಶಾಕ್ಯ
ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳ ನಂತರ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ನೊದಿಗಿನ ಫೋಟೋವನ್ನು ಟ್ವೀಟ್ ಮಾಡಿ, ಸಮಾಜವಾದಿ ಪಕ್ಷ ಸೇರುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು.
ಇದನ್ನೂ ಓದಿ: ಉತ್ತರ ಪ್ರದೇಶ: ಬಿಜೆಪಿಗೆ ಮತ್ತೊಂದು ಆಘಾತ; ಅರಣ್ಯ ಸಚಿವ ದಾರಾ ಸಿಂಗ್ ಚೌಹಾಣ್ ರಾಜೀನಾಮೆ
ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ಬಿಜೆಪಿಗೆ ರಾಜೀನಾಮೆ ನೀಡಿದ ನಂತರ, ರಾಜ್ಯದ ಇತರ ನಬಿಜೆಪಿ ಶಾಸಕರು ಪಕ್ಷವನ್ನು ತೊರೆದಿದ್ದಾರೆ.
ಏನಿದು ಪ್ರಕರಣ?
ಮದುವೆಯ ಸಂದರ್ಭದಲ್ಲಿ ಗೌರಿ ಅಥವಾ ಗಣೇಶನನ್ನು ಪೂಜಿಸಬಾರದು. ಇದು ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದಾರಿತಪ್ಪಿಸಲು ಮತ್ತು ಗುಲಾಮರನ್ನಾಗಿ ಮಾಡಲು ಮೇಲ್ಜಾತಿ ಪ್ರಾಬಲ್ಯದ ಪಿತೂರಿಯಾಗಿದೆ ಎಂದು ಮೌರ್ಯ ಸಭೆಯೊಂದರಲ್ಲಿ ಹೇಳಿದ್ದರು. ಈ ಘಟನೆ ವೇಳೆ ಅವರು ಬಿಎಸ್ಪಿ ಪಕ್ಷದಲ್ಲಿದ್ದರು.
ಇದನ್ನೂ ಓದಿ: ಇದೇ ಮೊದಲು: ಅಂಧ ವ್ಯಕ್ತಿಗೆ ರಾಜಕೀಯ ಪಕ್ಷದ ಕಾರ್ಯದರ್ಶಿ ಸ್ಥಾನ: ಮಾದರಿಯಾದ ಸಿಪಿಎಂ
ಈ ಪ್ರಕರಣ ಸಂಬಂಧ ಇಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮೌರ್ಯ ಅವರಿಗೆ ಸೂಚಿಸಲಾಗಿತ್ತು. ಆದರೆ ಅವರು ಹಾಜರಾಗಲಿಲ್ಲ. ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ ಪ್ರಕರಣದಲ್ಲಿ ಜನವರಿ 24 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ತಿಳಿಸಲಾಗಿದೆ.
ಇದನ್ನೂ ಓದಿ: ಮಕ್ಕಳ ಪಾಲನೆ ಬಗ್ಗೆ ಗುಜರಾತ್ ಐಪಿಎಸ್ ಅಧಿಕಾರಿಯಿಂದ ಪೋಷಕರಿಗೆ 'ಪೇರೆಂಟಿಂಗ್ ಫಾರ್ ಪೀಸ್' ಉಚಿತ ತರಬೇತಿ