ದೇಶದಲ್ಲಿ ಓಮಿಕ್ರಾನ್ ಅಬ್ಬರ: ಸೋಂಕಿತರ ಸಂಖ್ಯೆ 5,753ಕ್ಕೆ ಏರಿಕೆ
ಭಾರತದಲ್ಲಿ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹೊತ್ತಿನಲ್ಲೇ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 5,753 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.
Published: 14th January 2022 09:57 AM | Last Updated: 14th January 2022 12:16 PM | A+A A-

ಸಂಗ್ರಹ ಚಿತ್ರ
ನವದಹಲಿ: ಭಾರತದಲ್ಲಿ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹೊತ್ತಿನಲ್ಲೇ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 5,753 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 5,753ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ಭಾರತದಲ್ಲಿ ಕೊರೋನಾ ಸ್ಫೋಟ: ದೇಶದಲ್ಲಿ 24 ಗಂಟೆಗಳಲ್ಲಿ 2.64 ಲಕ್ಷ ಹೊಸ ಪತ್ತೆ, 315 ಮಂದಿ ಸಾವು
ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.