ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ಸ್ವಲ್ಪ ಇಳಿಕೆ, ಇಂದು 46,406 ಮಂದಿಗೆ ಪಾಸಿಟಿವ್
ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ಸ್ವಲ್ಪ ಕಡಿಮೆಯಾಗಿದ್ದು, ಗುರುವಾರ 46,406 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇಂದು ನಿನ್ನೆಗಿಂತ 317 ಕಡಿಮೆ ಪ್ರಕರಣಗಳು ದಾಖಲಾಗಿವೆ.
Published: 14th January 2022 12:12 AM | Last Updated: 14th January 2022 12:12 AM | A+A A-

ಸಾಂದರ್ಭಿಕ ಚಿತ್ರ
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ಸ್ವಲ್ಪ ಕಡಿಮೆಯಾಗಿದ್ದು, ಗುರುವಾರ 46,406 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇಂದು ನಿನ್ನೆಗಿಂತ 317 ಕಡಿಮೆ ಪ್ರಕರಣಗಳು ದಾಖಲಾಗಿವೆ.
ಇಂದು ಮುಂಬೈನಲ್ಲಿ 13,702 ಸೇರಿದಂತೆ 46,406 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, 36 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 70,81,067 ಕ್ಕೆ ಏರಿದರೆ, ಸಾವಿನ ಸಂಖ್ಯೆ 1,41,737ಕ್ಕೆ ಏರಿದೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ತಿಳಿಸಿದೆ.
ಇದನ್ನು ಓದಿ: ಒಮಿಕ್ರಾನ್ ಬಗ್ಗೆ ಆತಂಕಬೇಡ, ಸೋಂಕು ಹರಡದಂತೆ ಕ್ರಮ ಕೈಗೊಳ್ಳಿ: ಸಿಎಂಗಳೊಂದಿಗೆ ಸಂವಾದದಲ್ಲಿ ಪ್ರಧಾನಿ ಸಲಹೆ
ರಾಜ್ಯದಲ್ಲಿ ಇಂದು ಯಾವುದೇ ಹೊಸ ಓಮಿಕ್ರಾನ್ ಪ್ರಕರಣಗಳು ವರದಿಯಾಗಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ.
ಮಹಾರಾಷ್ಟ್ರದಲ್ಲಿ ಬುಧವಾರ 46,723 ಪಾಸಿಟಿವ್ ಪ್ರಕರಣಗಳು ಮತ್ತು 32 ಸಾವುಗಳು ವರದಿಯಾಗಿದ್ದವು.
ಕಳೆದ 24 ಗಂಟೆಗಳಲ್ಲಿ 34,658 ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಚೇತರಿಸಿಕೊಂಡ ಪ್ರಕರಣಗಳ ಸಂಖ್ಯೆ 66,83,769 ಕ್ಕೆ ಏರಿಕೆಯಾಗಿದೆ ಎಂದು ಇಲಾಖೆ ತಿಳಿಸಿದೆ.