ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 14.84 ಕೋಟಿ ಬಳಕೆಯಾಗದ ಕೋವಿಡ್ ಲಸಿಕೆ ಡೋಸ್ ಲಭ್ಯ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಲೂ ಸುಮಾರು 14.84 ಕೋಟಿ ಡೋಸ್ ಬಳಕೆಯಾಗದ ಕೋವಿಡ್ ಲಸಿಕೆ ಲಭ್ಯವಿರುವುದಾಗಿ ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ.
Published: 15th January 2022 12:18 PM | Last Updated: 15th January 2022 05:40 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಲೂ ಸುಮಾರು 14.84 ಕೋಟಿ ಡೋಸ್ ಬಳಕೆಯಾಗದ ಕೋವಿಡ್ ಲಸಿಕೆ ಲಭ್ಯವಿರುವುದಾಗಿ ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ.
ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ ಬಳಕೆಯಾಗದ ಸುಮಾರು 14.84,52.821 ಕೋಟಿ ಡೋಸ್ ಲಸಿಕೆ ಲಭ್ಯವಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಇಲ್ಲಿಯವರೆಗೂ 157.87 ಕೋಟಿ ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತ ದರದ ಮಾರ್ಗಗಳು ಹಾಗೂ ರಾಜ್ಯಗಳು ನೇರವಾಗಿ ಖರೀದಿಸುವ ವಿಧಾನದ ಮೂಲಕ ಪೂರೈಸಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಈ ಮಧ್ಯೆ ದೇಶದಲ್ಲಿ ಕೋವಿಡ್ ಲಸಿಕೆ ನೀಡುವಿಕೆ 156.02ಕೋಟಿಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 58 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ