ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಟ್ರ್ಯಾಕ್ಟರ್-ಕಾರು ಡಿಕ್ಕಿ, 5 ಮಂದಿ ದುರ್ಮರಣ
ಬನಸ್ಕಾಂತ ಜಿಲ್ಲೆಯ ಥರದ್-ಧನೇರಾ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ ಎದುರಾದ ಪರಿಣಾಮ ಐದು ಮಂದಿ ಸಾವನ್ನಪ್ಪಿರುವ ಭಾನುವಾರ ಬೆಳಿಗ್ಗೆ ನಡೆದಿದೆ.
Published: 16th January 2022 12:25 PM | Last Updated: 16th January 2022 12:25 PM | A+A A-

ಸಂಗ್ರಹ ಚಿತ್ರ
ಬನಸ್ಕಾಂತ (ಗುಜರಾತ್): ಬನಸ್ಕಾಂತ ಜಿಲ್ಲೆಯ ಥರದ್-ಧನೇರಾ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ ಎದುರಾದ ಪರಿಣಾಮ ಐದು ಮಂದಿ ಸಾವನ್ನಪ್ಪಿರುವ ಭಾನುವಾರ ಬೆಳಿಗ್ಗೆ ನಡೆದಿದೆ.
ಇಂದು ಬೆಳಿಕ್ಕೆ ಟ್ರ್ಯಾಕ್ಟರ್ ಚಾಲಕ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.