ಕೋವಿಡ್ ನಿಯಮ ಉಲ್ಲಂಘನೆ: ಎಸ್ ಪಿಗೆ ಚುನಾವಣಾ ಆಯೋಗದ ನೋಟಿಸ್
ಪಕ್ಷದ ಕಚೇರಿಯಲ್ಲಿ ವರ್ಚುಯಲ್ ರ್‍ಯಾಲಿ ಹೆಸರಿನಲ್ಲಿ ಜನರನ್ನು ಸೇರಿಸಿ ಕೋವಿಡ್- ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದೆ.
Published: 16th January 2022 03:20 PM | Last Updated: 16th January 2022 03:20 PM | A+A A-

ಅಖಿಲೇಶ್ ಯಾದವ್
ಲಖನೌ: ಪಕ್ಷದ ಕಚೇರಿಯಲ್ಲಿ ವರ್ಚುಯಲ್ ರ್‍ಯಾಲಿ ಹೆಸರಿನಲ್ಲಿ ಜನರನ್ನು ಸೇರಿಸಿ ಕೋವಿಡ್- ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ದೊರೆತ ಸಾಕ್ಷಿಗಳನ್ನು ಪರಿಣಿಸಿದ ನಂತರ ಕೋವಿಡ್ ನಿಯಮ ಉಲ್ಲಂಘನೆ ಕುರಿತು ವಿವರಣೆ ನೀಡುವಂತೆ ಚುನಾವಣಾ ಆಯೋಗ ಸಮಾಜವಾದಿ ಪಕ್ಷಕ್ಕೆ ಸೂಚಿಸಿದೆ.
ಈ ನೋಟಿಸ್ ತಲುಪಿದ 24 ಗಂಟೆಯೊಳಗೆ ಚುನಾವಣಾ ಆಯೋಗಕ್ಕೆ ವಿವರಣೆ ತಲುಪಿಸಬೇಕು, ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿಗೆ ನೀಡಿರುವ ನೋಟಿಸ್ ನಲ್ಲಿ ತಿಳಿಸಲಾಗಿದೆ.
ಫೆಬ್ರವರಿ 10 ರಿಂದ ಮಾರ್ಚ್ 7ರ ನಡುವೆ ಏಳು ಹಂತಗಳಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ಕಾರಣದಿಂದಾಗಿ ಸಾರ್ವಜನಿಕ ಸಭೆಗಳು, ರ್‍ಯಾಲಿಗಳನ್ನು ನಿಷೇಧಿಸಲಾಗಿದೆ.