ಉತ್ತರ ಪ್ರದೇಶ: ಬಿಜೆಪಿ ಸೇರಲಿದ್ದಾರಾ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಸೊಸೆ?
ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಸಾಕಷ್ಟು ಪಕ್ಷಾಂತರಗಳಿಗೆ ಕಾರಣವಾಗಿದೆ. ಸಮಾಜವಾದಿ ಪಕ್ಷದ ಪರಮೋಚ್ಚ ನಾಯಕ ಮುಲಾಯಂ ಸಿಂಗ್ ಯಾದವ್ ಕಿರಿಯ ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರುವ ಸಾಧ್ಯತೆಯಿದೆ
Published: 16th January 2022 02:55 PM | Last Updated: 16th January 2022 03:47 PM | A+A A-

ಮುಲಾಯಂ ಸಿಂಗ್ ಯಾದವ್ ಅವರ ಕಿರಿ ಸೊಸೆ
ಲಖನೌ: ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಸಾಕಷ್ಟು ಪಕ್ಷಾಂತರಗಳಿಗೆ ಕಾರಣವಾಗಿದೆ. ಸಮಾಜವಾದಿ ಪಕ್ಷದ ಪರಮೋಚ್ಚ ನಾಯಕ ಮುಲಾಯಂ ಸಿಂಗ್ ಯಾದವ್ ಕಿರಿಯ ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ನಂಬಲರ್ಹ ಮೂಲಗಳು ಹೇಳಿವೆ.
ಅಪರ್ಣಾ ಸಿಂಗ್ ಯಾದವ್ ಅವರು ಮುಲಾಯಂ ಸಿಂಗ್ ಅವರ ಕಿರಿಯ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ. 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ, ಬಿಜೆಪಿಯ ರೀಟಾ ಬಹುಗುಣ ಜೋಶಿ ಎದುರು ಪರಾಭವಗೊಂಡಿದ್ದರು. ನಂತರದ ದಿನಗಳಲ್ಲಿ ಸಮಾಜವಾದಿ ಪಕ್ಷದಲ್ಲಿದ್ದರೂ ಎನ್ ಡಿ ಎ ಸರ್ಕಾರದ ಕ್ರಮಗಳನ್ನು ಶ್ಲಾಘಿಸುತ್ತಿದ್ದರು. ಈಗ ಅಪರ್ಣಾ ಯಾದವ್ ಬಿಜೆಪಿ ಸೇರುವ ಸಾಧ್ಯತೆಯ ಬಗ್ಗೆ ಮೂಲಗಳು ಹೇಳಿವೆ.
ಸಮಾಜವಾದಿ ಪಕ್ಷದಿಂದ ಈಗಾಗಲೇ ಹಲವಾರು ಮಂದಿ ಪಕ್ಷಾಂತರ ಮಾಡಿದ್ದು, ಈ ಮಧ್ಯೆ ಅಪರ್ಣಾ ಯಾದವ್ ಬಿಜೆಪಿಗೆ ಸೇರಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಮೇಲೆ ಪರಿಣಾಮ ಉಂಟಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಇತ್ತೀಚೆಗೆ, ಯೋಗಿ ಸಂಪುಟದಲ್ಲಿ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ, ಧರಂ ಸಿಂಗ್ ಸೈನಿ ಇತರ ಶಾಸಕರು.. ಬೆಂಬಲಿಗರೊಂದಿಗೆ ಸಮಾಜವಾದಿ ಪಕ್ಷ ಸೇರ್ಪಡೆಗೊಂಡಿದ್ದರು.