ಆರೋಪ-ಪ್ರತ್ಯಾರೋಪದಿಂದ ಕೊರೋನಾ ನಿರ್ಮೂಲನೆ ಆಗಲ್ಲ: ದೆಹಲಿ ಸಿಎಂ ಕೇಜ್ರಿವಾಲ್
ಸಾಂಕ್ರಾಮಿಕ ರೋಗವಾದ ಕೋವಿಡ್ -೧೯ ಪರಿಸ್ಥಿತಿಯ ಬಗ್ಗೆ ಆರೋಪ - ಪ್ರತ್ಯಾರೋಪ ಮಾಡುತ್ತಾ ಕುಳಿತುಕೊಂಡರೆ ಯಾವುದೇ ಪ್ರಯೋಜನವಿಲ್ಲ. ಇಡೀ ದೇಶದಿಂದ ಕೊರೋನಾ ತೊಡೆದುಹಾಕು ಪಣ ತೊಡಬೇಕು ಎಂದು...
Published: 17th January 2022 03:56 PM | Last Updated: 17th January 2022 03:56 PM | A+A A-

ಅರವಿಂದ್ ಕೇಜ್ರಿವಾಲ್
ನವದೆಹಲಿ: ಸಾಂಕ್ರಾಮಿಕ ರೋಗವಾದ ಕೋವಿಡ್ -೧೯ ಪರಿಸ್ಥಿತಿಯ ಬಗ್ಗೆ ಆರೋಪ - ಪ್ರತ್ಯಾರೋಪ ಮಾಡುತ್ತಾ ಕುಳಿತುಕೊಂಡರೆ ಯಾವುದೇ ಪ್ರಯೋಜನವಿಲ್ಲ. ಇಡೀ ದೇಶದಿಂದ ಕೊರೋನಾ ತೊಡೆದುಹಾಕು ಪಣ ತೊಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಕಿವಿಮಾತು ಹೇಳಿದ್ದಾರೆ.
ದೆಹಲಿಯಲ್ಲಿ ಹೆಚ್ಚುತ್ತಿರುವ ಕೊರೋನಾ ವೈರಸ್ ಪ್ರಕರಣಗಳು NCR(ರಾಷ್ಟ್ರೀಯ ರಾಜಧಾನಿ ಪ್ರದೇಶ) ಮೇಲೆ ಪರಿಣಾಮ ಬೀರಿದೆ ಮತ್ತು ಗುರುಗ್ರಾಮ್, ಫರಿದಾಬಾದ್ ಮತ್ತು ಸೋನಿಪತ್ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಲು ಕಾರಣವಾಗಿದೆ” ಎಂದು ಹೇಳಿದ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರ ಹೇಳಿಕೆಗೆ ದೆಹಲಿ ಸಿಎಂ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ನಾನು ಕೊರೋನಾ ಸಂಕಷ್ಟದ ಪರಿಸ್ಥಿತಿಯನ್ನು ತೆಗಳುತ್ತಾ ಕೂರುವುದಿಲ್ಲ. ಆಪಾದನೆ ರೋಗವನ್ನು ತೊಲಗಿಸುವುದಿಲ್ಲ. ದೇಶದಲ್ಲಿ ಕೊರೋನಾ ವೈರಸ್ ಎಲ್ಲಿದ್ದರೂ ನಿವಾರಿಸಲು ಪ್ರಯತ್ನಿಸಿಸಬೇಕು ಎಂದು ಹೇಳಿದರು.
ದೆಹಲಿಯಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ ಮತ್ತು ಸೋಮವಾರ ಸುಮಾರು 12,000-13,000 ಹೊಸ ಪ್ರಕರಣಗಳು ದಾಖಲಾಗುವ ನಿರೀಕ್ಷೆ ಇದೆ. ಭಾನುವಾರದಂದು 18,000ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಅವರು ಹೇಳಿದರು.
ನಾಳೆ ಪಂಜಾಬ್ ಮುಕ್ಯಮಂತ್ರಿ ಅಭ್ಯರ್ಥಿ ಘೋಷಣೆ
ಅರವಿಂದ್ ಕೇಜ್ರಿವಾಲ್ ಅವರು ಪಂಜಾಬಿನ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನಾಳೆ (ಮಂಗಳವಾರ ಜನೆವರಿ ೧೮) ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.